ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: ಎರಡು ಕಪ್ಪು ಶಿಲೀಂಧ್ರ ಪ್ರಕರಣ ದೃಢ

Last Updated 11 ಜೂನ್ 2021, 1:56 IST
ಅಕ್ಷರ ಗಾತ್ರ

ದಾವಣಗೆರೆ: ಜಿಲ್ಲೆಯಲ್ಲಿ ಇಬ್ಬರಿಗೆ ಕಪ್ಪು ಶಿಲೀಂಧ್ರ ಇರುವುದು ಗುರುವಾರ ದೃಢಪಟ್ಟಿದೆ. ಇಬ್ಬರು ಕೂಡ ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು ಶಿಲೀಂಧ್ರ ಪ್ರಕರಣಗಳ ಸಂಖ್ಯೆ 69ಕ್ಕೇರಿದೆ. ಅದರಲ್ಲಿ 19 ಮಂದಿ ಗುಣಮುಖರಾಗಿದ್ದಾರೆ.

ಇಲ್ಲಿವರೆಗೆ ಜಿಲ್ಲಾ ಆಸ್ಪತ್ರೆಯಲ್ಲಿ 41 ಪ್ರಕರಣ ದೃಢಪಟ್ಟಿದ್ದು, 12 ಮಂದಿ ಗುಣಮುಖರಾಗಿದ್ದಾ‌ರೆ. ಎಸ್‌.ಎಸ್‌. ಹೈಟೆಕ್‌ ಆಸ್ಪತ್ರೆಯಲ್ಲಿ 25 ಮಂದಿಯಲ್ಲಿ ಶಿಲೀಂಧ್ರ ಕಾಣಿಸಿಕೊಂಡಿದ್ದು, 6 ಮಂದಿ ಗುಣಮುಖರಾಗಿದ್ದಾರೆ. ಬಾಪೂಜಿ ಆಸ್ಪತ್ರೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದು, ಒಬ್ಬರು ಬಿಡುಗಡೆಗೊಂಡಿದ್ದಾರೆ. ಕಾಲೇಜ್‌ ಆಫ್ ಡೆಂಟಲ್‌ ಸೈನ್ಸ್‌ನಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ.

ಕೊರೊನಾದಿಂದ ಏಳು ಮಂದಿ ಸಾವು: ಕೊರೊನಾ ಸೋಂಕಿನಿಂದ ಏಳು ಮಂದಿ ಮೃತಪಟ್ಟಿರುವುದು ಗುರುವಾರ ದೃಢಪಟ್ಟಿದೆ.

ದಾವಣಗೆರೆ ವಿನಾಯಕ ನಗರದ 55 ವರ್ಷದ ಮಹಿಳೆ, ಬೂದಿಹಾಳ್‌ನ 55 ವರ್ಷದ ಮಹಿಳೆ, ಹೊನ್ನಾಳಿ ಕಡದಕಟ್ಟೆಯ 70 ವರ್ಷದ ವೃದ್ಧೆ, 68 ವರ್ಷದ ವೃದ್ಧ, ಹರಿಹರ ತಾಲ್ಲೂಕಿನ ಬೆಳ್ಳೂಡಿಯ 65 ವರ್ಷದ ವೃದ್ಧೆ, ನಂದಿತಾವರೆಯ 50 ವರ್ಷದ ಮಹಿಳೆ, ನಾಗೇನಹಳ್ಳೀಯ 48 ವರ್ಷದ ಪುರುಷ ಮೃತಪಟ್ಟವರು.

ದಾವಣಗೆರೆ ತಾಲ್ಲೂಕಿನಲ್ಲಿ 133, ಹರಿಹರ ತಾಲ್ಲೂಕಿನಲ್ಲಿ 35, ಚನ್ನಗಿರಿ ತಾಲ್ಲೂಕಿನಲ್ಲಿ 85, ಹೊನ್ನಾಳಿ ತಾಲ್ಲೂಕಿನ 47, ಜಗಳೂರು ತಾಲ್ಲೂಕಿನಲ್ಲಿ 5 ಮಂದಿಗೆ ಕೊರೊನಾ ಬಂದಿದೆ. ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹೊರ ಜಿಲ್ಲೆಗಳ 8 ಮಂದಿಯಲ್ಲಿ ಸೋಂಕು ಇರುವುದು ಖಚಿತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT