ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ತವ್ಯಲೋಪ: ಇಬ್ಬರು ಸರ್ಕಾರಿ ನೌಕರರ ಅಮಾನತು

Last Updated 11 ಮೇ 2020, 16:14 IST
ಅಕ್ಷರ ಗಾತ್ರ

ದಾವಣಗೆರೆ: ಕೊರೊನಾ ವೈರಸ್ ನಿಯಂತ್ರಣದ ಹಿನ್ನೆಲೆಯಲ್ಲಿ ಚೆಕ್‍ಪೋಸ್ಟ್‌ಗೆ ನಿಯೋಜಿಸಲಾಗಿದ್ದ ಸಹ ಶಿಕ್ಷಕ ಮತ್ತು ದ್ವಿತೀಯ ದರ್ಜೆ ಸಹಾಯಕನನ್ನು ಕರ್ತವ್ಯ ಲೋಪದ ಕಾರಣ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅಮಾನತು ಮಾಡಿದ್ದಾರೆ.

ಮೋತಿವೀರಪ್ಪ ಪದವಿಪೂರ್ವ ಕಾಲೇಜಿನ ಸಹ ಶಿಕ್ಷಕ ನಾಗರಾಜ್ ಎಂ. ಮತ್ತು ವಿಶ್ವಬಂಧು ಪ್ರೌಢಶಾಲೆಯ ದ್ವಿತೀಯ ದರ್ಜೆ ಸಹಾಯಕ ವೆಂಕಟೇಶ್ ನಾಯ್ಕ ಅಮಾನತುಗೊಂಡವರು.

ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಇದನ್ನು ತಡೆಗಟ್ಟುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ದಾವಣಗೆರೆ ನಗರ ಪ್ರದೇಶಕ್ಕೆ ವಿದೇಶಗಳಿಂದ, ಹೊರರಾಜ್ಯಗಳಿಂದ ಹಾಗೂ ಬೇರೆ ಜಿಲ್ಲೆಗಳಿಂದ ಬರುವ ವಾಹನಗಳನ್ನು ಮತ್ತು ಪ್ರಯಾಣಿಕರನ್ನು ತಪಾಸಣೆ ಮಾಡಲು ನಗರದಲ್ಲಿ ಚೆಕ್‍ಪೋಸ್ಟ್‌ಗಳನ್ನು ಸ್ಥಾಪಿಸಿ ಆದೇಶಿಸಲಾಗಿತ್ತು.

ಈ ಚೆಕ್‍ಪೊಸ್ಟ್ ನೋಡಲ್ ಅಧಿಕಾರಿಯಾಗಿ ಡಿಡಿಪಿಐ ಅವರನ್ನು ನೇಮಿಸಿದ್ದು, ಇವರು ಮೇ 5 ಮತ್ತು 6 ರಂದು ಚೆಕ್‍ಪೋಸ್ಟ್‌ಗೆ ಭೇಟಿ ನೀಡಿದ ಸಂದರ್ಭ ಈ ಇಬ್ಬರು ಕರ್ತವ್ಯಕ್ಕೆ ಗೈರು ಹಾಜರಾಗಿ ಕರ್ತವ್ಯ ನಿರ್ಲಕ್ಷ್ಯ ವಹಿಸಿರುವುದು ಕಂಡು ಬಂದ ಹಿನ್ನೆಲೆಯನ್ನು ಇವರನ್ನು ಅಮಾನತು ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT