ದಾವಣಗೆರೆ: ಮೂಲಸೌಲಭ್ಯಗಳನ್ನು ಕಲ್ಪಿಸಿ ಶಿಕ್ಷಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ಬದಲು ಸರ್ಕಾರವೇ ಶೋಚನೀಯ ಸ್ಥಿತಿಗೆ ತಳ್ಳುತ್ತಿದೆ. ಎಂಜಿನಿಯರಿಂಗ್ ಕಾಲೇಜು ಸೀಟು ಮಾರಾಟದ ಮೂಲಕ ಜನರಿಗೆ ಮೋಸ ಮಾಡುತ್ತಿದೆ ಎಂದು ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಬೇಸರ ವ್ಯಕ್ತಪಡಿಸಿದರು.

ಇಲ್ಲಿನ ಕುವೆಂಪು ಕನ್ನಡ ಭವನದಲ್ಲಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್ ಮಂಗಳವಾರ ಹಮ್ಮಿಕೊಂಡಿದ್ದ ಯುಬಿಡಿಟಿ ಕಾಲೇಜು ಉಳಿಸಿ ಪ್ರತಿಭಟನಾ ಸಮಾವೇಶದಲ್ಲಿ ಅವರು ಮಾತನಾಡಿದರು.

‘ಶಾಲೆ–ಕಾಲೇಜುಗಳು ಸಮರ್ಪಕ ಸೌಲಭ್ಯಗಳಿಲ್ಲದೇ ಸೊರಗುತ್ತಿವೆ. ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳದೇ ಶಿಕ್ಷಣ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ ವಿರುದ್ಧ ನಡೆದ ಚಳವಳಿಯ ಮಾದರಿಯಲ್ಲಿ ಯುಬಿಡಿಟಿ ಕಾಲೇಜು ರಕ್ಷಣೆಗೆ ಹೋರಾಟ ಮಾಡಬೇಕು’ ಎಂದು ಸಲಹೆ ನೀಡಿದರು.

‘ಸರ್ಕಾರಿ ಕಾಲೇಜುಗಳಲ್ಲಿ ಪೇಮೆಂಟ್ ಕೋಟಾ ಎಂಬ ಕೆಟ್ಟ ಸಂಪ್ರದಾಯವನ್ನು ಆರಂಭಿಸಲಾಗುತ್ತಿದೆ. ಒಂದೇ ತರಗತಿಯಲ್ಲಿ ಓದುವ ವಿದ್ಯಾರ್ಥಿಗಳನ್ನು ಒಡೆದು ಆಳುವ ನೀತಿ ಇದಾಗಿದೆ. ಪೇಮೆಂಟ್ ಕೋಟಾ ಹೆಸರಲ್ಲಿ ವಿದ್ಯಾರ್ಥಿಗಳಿಂದ ವಸೂಲಿ ಮಾಡುವ ಶುಲ್ಕವನ್ನು ಸರ್ಕಾರ ಭರಿಸುವುದು ದೊಡ್ಡದಲ್ಲ’ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಪ್ರೊ.ಎ.ಮುರುಗಪ್ಪ ಅಭಿಪ್ರಾಯಪಟ್ಟರು.

‘ರಾಜ್ಯದ ಬಡ ಜನರಿಗೆ ಸರ್ಕಾರ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದಿದೆ. ಉಚಿತ ಶಿಕ್ಷಣವನ್ನು 6ನೇ ಗ್ಯಾರಂಟಿಯಾಗಿ ರೂಪಿಸಿದರೆ ಅನುಕೂಲವಾಗುತ್ತದೆ. ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣ ಸಿಗುವಂತಾಗಬೇಕು. ಸಂಸದರು, ಶಾಸಕರು ಹಾಗೂ ಸಚಿವರು ಗಮನ ಹರಿಸಬೇಕು‘ ಎಂದು ಹೇಳಿದರು.

ಡಿಆರ್‌ಎಂ ವಿಜ್ಞಾನ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ಕೆ.ಎಸ್.ಈಶ್ವರಪ್ಪ, ‘ಯುಬಿಡಿಟಿ ಕಾಲೇಜಿನ ದುಸ್ಥಿಃತಿ ಬೇಸರ ಮೂಡಿಸಿದೆ. ರಾಜ್ಯದ ಏಕೈಕ ತಾಂತ್ರಿಕ ವಿಶ್ವವಿದ್ಯಾಲಯ ಕಾಲೇಜು ಪ್ರವೇಶಾತಿಗೆ ಹೆಚ್ಚಿನ ಪ್ರಮಾಣದ ಶುಲ್ಕ ನಿಗದಿ ಮಾಡಿದ್ದು ಸರಿಯಲ್ಲ. ಪ್ರಜಾಪ್ರಭುತ್ವ ಉಳಿಸಿ ದಿನವನ್ನು ಆಚರಿಸಿದ ಸರ್ಕಾರ, ಪ್ರಜಾಪ್ರಭುತ್ವ ವಿರೋಧಿ ನಿಲುವು ಕೈಗೊಂಡಿದೆ’ ಎಂದು ಬೇಸರ ಹೊರಹಾಕಿದರು.

‘ಎಲ್ಲರಿಗೂ ಶಿಕ್ಷಣ ಸಿಗಬೇಕು ಎಂಬ ಉದ್ದೇಶದಿಂದ ಆರಂಭಿಸಿದ ಕಾಲೇಜಿಗೆ ಈ ಸ್ಥಿತಿ ಬರಬಾರದಿತ್ತು. ಅಹಿಂದ ಪರ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ, ವಿದ್ಯಾರ್ಥಿಗಳ ಕೂಗು ಆಲಿಸಬೇಕು. ಶಾಸಕ ಶಾಮನೂರು ಶಿವಶಂಕರಪ್ಪ ಅವರು ಇತ್ತ ಗಮನ ಹರಿಸಬೇಕು’ ಎಂದು ಹೇಳಿದರು.

ಯುಬಿಡಿಟಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಸುರೇಶ್ ಚಂದ್ರ ಮೋಹನ್, ಎಐಡಿಎಸ್ಓ ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದಕೊಪ್ಪ, ರಾಜ್ಯ ಕಾರ್ಯದರ್ಶಿ ಮಹಾಂತೇಶ್, ಜಿಲ್ಲಾ ಘಟಕದ ಅಧ್ಯಕ್ಷೆ ಪೂಜಾ ನಂದಿಹಳ್ಳಿ, ಜಿಲ್ಲಾ ಕಾರ್ಯದರ್ಶಿ ಟಿ.ಎಸ್.ಸುಮನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.