ಉಕ್ಕಡಗಾತ್ರಿ: ಇಂದಿನಿಂದ ಕರಿಬಸವೇಶ್ವರ ದರ್ಶನ ಪುನರಾರಂಭ

ಮಲೇಬೆನ್ನೂರು: ಸಮೀಪದ ಉಕ್ಕಡಗಾತ್ರಿ ಕರಿಬಸವೇಶ್ವರ (ಅಜ್ಜಯ್ಯ) ದರ್ಶನ, ಪೂಜೆ ಪುನರಾರಂಭ ಮಾಡಲಾಗಿದೆ ಎಂದು ಟ್ರಸ್ಟ್ ಕಾರ್ಯದರ್ಶಿ ಸುರೇಶ್ ತಿಳಿಸಿದ್ದಾರೆ.
ಕಳೆದ ಎರಡು ತಿಂಗಳಿಂದ ಕೊರೊನಾ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಅರ್ಚಕರಿರಿಗೆ ಮಾತ್ರ ಪೂಜೆ ಮಾಡಲು ಅವಕಾಶ ನೀಡಲಾಗಿತ್ತು. ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದ ನಂತರ ಪೂಜಾವಿಧಿ ಆರಂಭ ಮಾಡಲಾಗಿದೆ. ವಸತಿ ನಿಲಯ, ಪ್ರಸಾದ ನಿಲಯ ಪ್ರಾರಂಭ ಮಾಡಿಲ್ಲ ಎಂದು ಮಾಹಿತಿ ನೀಡಿದರು.
ಮುಂಜಾಗ್ರತಾ ಕ್ರಮವಾಗಿ ದೇವಾಲಯ, ಸುತ್ತಮುತ್ತಲ ಪ್ರದೇಶವನ್ನು ಸ್ಯಾನಿಟೈಸ್ ಮಾಡಲಾಗಿದೆ. ಕೊರೊನಾ ನಿಯಮದಂತೆ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿ, ಸರತಿ ಸಾಲಿನಲ್ಲಿ ಬಂದು ದರ್ಶನ ಮಾಡಿ ಪೂಜೆ ಸಲ್ಲಿಸಬಹುದು. ಗುಂಪುಗೂಡಲು, ಭಜನೆ ಮಾಡಲು ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.