ದಾವಣಗೆರೆ: ತಾಲ್ಲೂಕಿನ ಮಾಗನಹಳ್ಳಿ ಗೇಟ್ ಸಮೀಪದ ಚೆಕ್ಪೋಸ್ಟ್ನಲ್ಲಿ ದಾಖಲೆ ಇಲ್ಲದೇ ಸಾಗಣೆ ಮಾಡುತ್ತಿದ್ದ ₹ 1.12 ಲಕ್ಷವನ್ನು ಬುಧವಾರ ಜಪ್ತಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎಚ್.ಟಿ. ಶೇಖರ್ ತಿಳಿಸಿದರು.

‘ಕಾಂಡಿಮೆಂಟ್ಸ್ ಉದ್ಯಮಕ್ಕೆ ಸೇರಿದ್ದ ಸರಕು ಸಾಗಣೆ ವಾಹನದಲ್ಲಿ ಹಣ ಪತ್ತೆಯಾಗಿದೆ. ಅಕ್ಕಿಹಿಟ್ಟು ಕೊಂಡೊಯ್ಯಲು ಚನ್ನಪಟ್ಟಣದಿಂದ ಬರುತ್ತಿದ್ದ ವಾಹನ ತಪಾಸಣೆ ನಡೆಸಿದಾಗ ಹಣ ಸಿಕ್ಕಿದೆ. ಸೂಕ್ತ ದಾಖಲೆ ಹಾಜರುಪಡಿಸುವಂತೆ ಸೂಚಿಸಲಾಗಿದೆ’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನಲೆಯಲ್ಲಿ 11 ಚೆಕ್ಪೋಸ್ಟ್ ತೆರೆಯಲಾಗಿದೆ. 8 ವಿಚಕ್ಷಣಾ ದಳಗಳು ಕಾರ್ಯನಿರ್ವಹಿಸುತ್ತಿವೆ. ಈವರೆಗೆ ಅಕ್ರಮ ಮದ್ಯ ಸಾಗಣೆಗೆ ಸಂಬಂಧಿಸಿದ 7 ಪ್ರಕರಣಗಳು ದಾಖಲಾಗಿವೆ. 22 ಲೀಟರ್ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ’ ಎಂದು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.