ಶುಕ್ರವಾರ, ಸೆಪ್ಟೆಂಬರ್ 17, 2021
25 °C

ಅಮಿತ್‌ ಶಾ ಕಾರ್ಯಕ್ರಮದಲ್ಲಿ ದಿಢೀರ್‌ ಬದಲಾವಣೆ: ಒಂದೇ ಕಡೆ ಕಾರ್ಯಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮಕ್ಕೆ ದಾವಣಗೆರೆಯ ಜಿಎಂಐಟಿ ಕ್ಯಾಂಪಸ್‌ನಲ್ಲಿ ವೇದಿಕೆ ಸಿದ್ದಗೊಳಿಸಿರುವುದು

ದಾವಣಗೆರೆ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ದಾವಣಗೆರೆಯಲ್ಲಿ ಮೂರು ಕಡೆ ಉದ್ಘಾಟನೆ ಕಾರ್ಯಕ್ರಮಗಳಲ್ಲಿ ಭಾಗಿಯಾಗಬೇಕಿತ್ತು. ಅದಕ್ಕಾಗಿ ಎಲ್ಲ ಸಿದ್ಧತೆಗಳು ನಡೆದಿದ್ದವು. ಇದೀಗ ಎಲ್ಲ ಕಾರ್ಯಕ್ರಮಗಳನ್ನು ಜಿಎಂಐಟಿ ಆವರಣದಲ್ಲಿಯೇ ನಡೆಸಲು ನಿರ್ಧರಿಸಲಾಗಿದೆ.

ಮಧ್ಯಾಹ್ನ ಜಿಎಂಐಟಿ ಹೆಲಿಪ್ಯಾಡ್‌ಗೆ ಬಂದು ನಗರದ ರಾಮನಗರಕ್ಕೆ ತೆರಳಿ ಗಾಂಧಿಭವನವನ್ನು ಉದ್ಘಾಟಿಸಬೇಕಿತ್ತು. ಅಲ್ಲಿಂದ ಕೊಂಡಜ್ಜಿ ಬಸಪ್ಪ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಬೇಕಿತ್ತು. ಬಳಿಕ ಪೊಲೀಸ್‌ ಪಬ್ಲಿಕ್‌ ವಸತಿ ಶಾಲೆ ಉದ್ಘಾಟಿಸಬೇಕಿತ್ತು. ಅಲ್ಲಿಂದ ವಾಪಸ್ಸಾದ ಬಳಿಕ ಜಿಎಂಐಟಿಯಲ್ಲಿ ಕೇಂದ್ರ ಗ್ರಂಥಾಲಯ ಉದ್ಘಾಟಿಸಬೇಕಿತ್ತು. 

ರಾಮನಗರ, ಕೊಂಡಜ್ಜಿ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಜಿಎಂಐಟಿ ಆವರಣದಿಂದಲೇ ಅವುಗಳಿಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮ ಬದಲಾವಣೆಗೆ ಭದ್ರತೆಯ ಕಾರಣ ನೀಡಲಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿಯಿಂದ ವಿಶೇಷ ಹೆಲಿಕಾಪ್ಟರ್‌ನಲ್ಲಿ ದಾವಣಗೆರೆಗೆ ತೆರಳಿದ ಅಮಿತ್ ಶಾ

ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮಕ್ಕೆ ದಾವಣಗೆರೆಯ ಜಿಎಂಐಟಿ ಕ್ಯಾಂಪಸ್ ನಲ್ಲಿ ವೇದಿಕೆ ಸಿದ್ದಗೊಳಿಸಿರುವುದು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು