ದಾವಣಗೆರೆ: ವೀರ ಸೇನಾನಿ ಆಗಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಹೆಸರನ್ನು ಮೇಲ್ಸೇತುವೆಗೆ ಇಟ್ಟಿರುವುದು ಒಳ್ಳೆಯ ಕೆಲಸ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೇಳಿದರು.
ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದಿಂದ ಪಿ.ಬಿ. ರಸ್ತೆಯಿಂದ ಎಸ್‌ಪಿ ಕಚೇರಿ ಕಡೆ ಹೋಗುವ ಮೇಲ್ಸೇತುವೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೇಲ್ಸೆತುವೆ ನಾಮ ಫಲಕವನ್ನು ಮಂಗಳವಾರ ಅನಾವರಣಗೊಳಿಸಿದ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದರು.
ನಾಮಫಲಕದ ಕೆಳಗೆ ದೇವರಾಜ ಅರಸು ಪ್ರತಿಮೆ ಇರುವುದರಿಂದ ಗೊಂದಲ ಉಂಟಾಗುವುದಿಲ್ವ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಯಾವ ಗೊಂದಲವೂ ಉಂಟಾಗುವುದಿಲ್ಲ. ಜನರಿಗೆ ಸಂಗೊಳ್ಳಿ ರಾಯಣ್ಣ ಅಂದ್ರೆ ಯಾರು? ದೇವರಾಜ ಅರಸು ಅಂದರೆ ಯಾರು? ಎಂಬುದು ಗೊತ್ತಿದೆ’ ಎಂದು ಸಮರ್ಥಿಸಿಕೊಂಡರು.
ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಎಸ್.ಎ. ರವೀಂದ್ರನಾಥ್, ಧೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಪಾಲಿಕೆ ಮೇಯರ್ ಎಸ್.ಟಿ. ವೀರೇಶ್, ಧೂಡಾ ಆಯುಕ್ತ ಕುಮಾರಸ್ವಾಮಿ, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ಪಾಲಿಕೆ ಸದಸ್ಯರು, ಧೂಡಾ ಸದಸ್ಯರು, ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.