ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದಾವಣಗೆರೆ: ನವೀಕೃತ ಈಜುಕೊಳ ಸೇವೆಗೆ ಲಭ್ಯ

Published 19 ಫೆಬ್ರುವರಿ 2024, 5:49 IST
Last Updated 19 ಫೆಬ್ರುವರಿ 2024, 5:49 IST
ಅಕ್ಷರ ಗಾತ್ರ

ದಾವಣಗೆರೆ: ನಗರದ ಎಂಸಿಸಿ ‘ಬಿ’ ಬ್ಲಾಕ್ ನಲ್ಲಿರುವ ನವೀಕೃತ ಈಜುಕೊಳ ಫೆ. 20ರಿಂದ ಸಾರ್ವಜನಿಕರ ಸೇವೆಗೆ ಲಭ್ಯವಾಗಲಿದೆ.

ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ, ಪಾಲಿಕೆ ಸದಸ್ಯ ಗಡಿಗುಡಾಳ್ ಮಂಜುನಾಥ್ ಅವರು ಈಚೆಗೆ ಭೇಟಿ ನೀಡಿ ಪರಿಶೀಲಿಸಿದರು.

‘ಈಜುಕೊಳ ನವೀಕೃತಗೊಂಡಿದ್ದು, ಬೆ.6ರಿಂದ 9ರವರೆಗೆ ಸಾರ್ವಜನಿಕರು, ಬೆ.10ರಿಂದ 11ರವರೆಗೆ ಮಹಿಳೆಯರಿಗೆ ಮಾತ್ರ, ಮ.12ರಿಂದ ಮ. 3ಗಂಟೆಯವರೆಗೆ ಎಲ್ಲರಿಗೂ ಪ್ರವೇಶ ನೀಡಲಾಗುತ್ತಿದೆ. ಈಜು ಕಲಿಯುವವರಿಗೆ ಸಂಜೆ ತರಬೇತಿಯನ್ನೂ ನೀಡಲಾಗುತ್ತದೆ. ಇದಕ್ಕಾಗಿ ನುರಿತ ಈಜು ತರಬೇತುದಾರರ ನೇಮಕ ಮಾಡಲಾಗಿದೆ’ ಎಂದು ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ಹಾಗೂ ಸದಸ್ಯ ಗಡಿಗುಡಾಳ್ ಮಂಜುನಾಥ್ ಮಾಹಿತಿ ನೀಡಿದರು.

‘ನಗರದ ಜನರಿಗೋಸ್ಕರ ಈ ಈಜುಕೊಳ ನವೀಕರಣಗೊಳಿಸಿದ್ದು, ನಗರದ ಸಾರ್ವಜನಿಕರು ಹಾಗೂ ಮಕ್ಕಳು ಇದನ್ನು ಸದುಪಯೋಗಪಡೆದುಕೊಳ್ಳಬೇಕು’ ಎಂದು ಮನವಿ ಮಾಡಿದ್ದಾರೆ.

‘ಈ ಈಜುಕೊಳವು ಉತ್ತಮ ನಿರ್ವಹಣೆ ಆಗಬೇಕು. ಯಾವುದೇ ರೀತಿಯ ದೂರು ಬರಬಾರದು. ಅವಘಡ ಸಂಭವಿಸದಂತೆ ನೋಡಿಕೊಳ್ಳಬೇಕು. ನೀರನ್ನು ಆಗಾಗ್ಗೆ ಬದಲಾಯಿಸಬೇಕು. ಸಂತೋಷದಿಂದ ನೀರಿನಲ್ಲಿ ಆಟವಾಡಿ ಮಕ್ಕಳು, ಮಹಿಳೆಯರು, ಹಿರಿಯರು ಹೋಗುವಂತಹ ವಾತಾವರಣ ಕಲ್ಪಿಸಬೇಕು’ ಎಂದು ಗುತ್ತಿಗೆದಾರರಿಗೆ ಸೂಚಿಸಿದರು.

‘ಈಜುಕೊಳ ಈ ವಾರ್ಡ್‌ನ ಜನರ ಬಹು ವರ್ಷಗಳ ಬೇಡಿಕೆಯಾಗಿತ್ತು. ಎಲ್ಲರಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರ ಗಮನಕ್ಕೆ ತಂದ ಬಳಿಕ ಅವರು ಇದಕ್ಕೆ ಅನುದಾನ ನೀಡಿದ್ದರು’ ಎಂದು ಗಡಿಗುಡಾಳ್ ಮಂಜುನಾಥ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT