ಹೊನ್ನಾಳಿ, ನ್ಯಾಮತಿ ತಾಲ್ಲೂಕು ಆಸ್ಪತ್ರೆಗಳ ಮೇಲ್ದರ್ಜೆಗೇರಿಸಿ

ಬೆಂಗಳೂರು: ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕು ಆಸ್ಪತ್ರೆಗಳನ್ನು ಮೇಲ್ಡರ್ಜೆಗೇರಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಅವರನ್ನು ವಿಧಾನಸೌಧದ ಅವರ ಕಚೇರಿಯಲ್ಲಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಭೇಟಿ ಮಾಡಿ ಒತ್ತಾಯಿಸಿದರು.
ಹೊನ್ನಾಳಿ ತಾಲೂಕು ಆಸ್ಪತ್ರೆಯಲ್ಲಿ 100 ಬೆಡ್‌ಗಳಿವೆ. ಅದನ್ನು 200 ಬೆಡ್‌ಗಳಾಗಿ ಮಾಡಬೇಕು. ನ್ಯಾಮತಿ ತಾಲ್ಲೂಕು ಆಸ್ಪತ್ರೆಯಲ್ಲಿ 30 ಬೆಡ್‌ಗಳಿದ್ದು ಅದನ್ನು 100 ಬೆಡ್‌ಗಳಿಗೆ ಏರಿಸಬೇಕು ಎಂದು ಮನವಿ ಸಲ್ಲಿಸಿದರು.
ಇಲ್ಲಿನ ಜನರು ಅನಿವಾರ್ಯವಾಗಿ ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲಾ ಆಸ್ಪತ್ರೆಗಳನ್ನು ಅವಲಂಬಿಸಬೇಕಾದ ಪರಿಸ್ಥಿತಿ ಇದೆ. ಅವಳಿ ತಾಲ್ಲೂಕಿನ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಿದರೆ ಜಿಲ್ಲಾ ಆಸ್ಪತ್ರೆಗಳನ್ನು ಅವಂಬಿಸುವುದು ತಪ್ಪಲಿದೆ ಎಂದರು.
ಹೊನ್ನಾಳಿ ತಾಲ್ಲೂಕು ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನಿಂಗ್ ಮಿಷನ್ ನೀಡಬೇಕು. ಆಗ ದಾವಣಗೆರೆ,ಶಿವಮೊಗ್ಗಕ್ಕೆ ಹೋಗಿ ಸ್ಯ್ಯಾನಿಂಗ್‌ಗಾಗೀ ಸಾವಿರಾರು ರೂಪಾಯಿ ಹಣ ಖರ್ಚು ಮಾಡುವ ಪ್ರಮೇಯ ತಪ್ಪಲಿದೆ. ಸಾಕಷ್ಟು ಜನರು ಕಡು ಬಡ ಕುಟುಂಬದವರಿದ್ದಾರೆ. ಸಿಟಿ ಸ್ಯ್ಯಾನಿಂಗ್ ಇಲ್ಲೇ ಆರಂಭವಾದರೆ ಅವರಿಗೆ ಉಪಯೋಗವಾಗಲಿದೆ ಎಂದು ವಿವರಿಸಿದರು.
ವೈದ್ಯರ ಸಮಸ್ಯೆ ಇದೆ. ಕೂಡಲೇ ವೈದ್ಯರನ್ನು ನೇಮಕ ಮಾಡಬೇಕು. ಅವಳಿ ತಾಲ್ಲೂಕುಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಬೇಕಾದ ಪರಿಕರಗಳನ್ನು ನೀಡಬೇಕು ಎಂದು ಕೋರಿದರು.
ಈ ಸಂದರ್ಭ ಶಾಸಕ ಶಂಕರ್ ಪಾಟೀಲ್ ಮುನೇನಕೊಪ್ಪ, ಹರೀಶ್ ಪೂಂಜಾ, ನ್ಯಾಮತಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಸ್.ಪಿ. ರವಿಕುಮಾರ್, ಗ್ರಾಮ ಪಂಚಾಯಿತಿ ಸದಸ್ಯ ವೀರೇಶ್, ಮುಖಂಡರಾದ ಚೇತನ್, ಅಜಯ್ ರೆಡ್ಡಿ ಅವರೂ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.