ಗುರುವಾರ , ಆಗಸ್ಟ್ 11, 2022
25 °C
ಯುಪಿಎಸ್‌ಸಿ ರ‍್ಯಾಂಕ್‌ ವಿಜೇತ ಅವಿನಾಶ್ ಅಭಿಪ್ರಾಯ

ಬಾಲ್ಯದಲ್ಲೇ ಪರೀಕ್ಷೆ ಅರಿವು ಮೂಡಿಸಿ: ಯುಪಿಎಸ್‌ಸಿ ರ‍್ಯಾಂಕ್‌ ವಿಜೇತ ಅವಿನಾಶ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಉತ್ತರ ಭಾರತ ರಾಜ್ಯಗಳ ವಿದ್ಯಾರ್ಥಿಗಳಿಗೆ ಬಾಲ್ಯದಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಅರಿವು ಇರುವುದರಿಂದ ಯುಪಿಎಸ್‍ಸಿ ಪರೀಕ್ಷೆಯಲ್ಲಿ ಹೆಚ್ಚು ಮಂದಿ ತೇರ್ಗಡೆ ಹೊಂದುತ್ತಾರೆ ಎಂದು ಯುಪಿಎಸ್‌ಸಿ 31ನೇ ರ‍್ಯಾಂಕ್  ವಿಜೇತ  ಅವಿನಾಶ್ ವಿ. ಅಭಿಪ್ರಾಯಪಟ್ಟರು.

ನಗರದ ಎ.ವಿ. ಕಮಲಮ್ಮ ಮಹಿಳಾ ಕಾಲೇಜಿನಲ್ಲಿ ಐಕ್ಯೂಎಸಿ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ‘ಪ್ರೇರಣಾ ಭಾಷಣ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕರ್ನಾಟಕದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಅರಿವು ಬಹಳ ಕಡಿಮೆ ಇದ್ದು, ಈ ನಿಟ್ಟಿನಲ್ಲಿ ರಾಜ್ಯದ ಶಾಲಾ– ಕಾಲೇಜುಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

‘ವಿದ್ಯಾರ್ಥಿಗಳ ಜೀವನದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬಹಳ ಮುಖ್ಯ ಘಟ್ಟ. ಹಾಗಾಗಿ ವಿದ್ಯಾರ್ಥಿಗಳು ನಿರಂತರವಾಗಿ ಪರಿಶ್ರಮದಿಂದ ಅಭ್ಯಾಸ ಮಾಡಬೇಕು. ತಾವು ಓದಿದ್ದನ್ನು ಪುನರಾವರ್ತನೆ ಮಾಡುತ್ತಿರಬೇಕು. ನಿಮ್ಮ ಸಾಮರ್ಥ್ಯದ ಮೇಲೆ ನಂಬಿಕೆ ಇರಬೇಕು’ ಎಂದು ಹೇಳಿದರು. 

‘1970ರ ದಶಕದಲ್ಲಿ ದಾವಣಗೆರೆ ವ್ಯಾಪಾರ ವಹಿವಾಟು ಮಾಡುವ ಸ್ಥಳವಾಗಿತ್ತು. ಆದರೆ ಇಂದು ಶೈಕ್ಷಣಿಕ ಕ್ಷೇತ್ರವಾಗಿ ಬೆಳೆದಿದೆ. ಹಣ ಮಾಡುವುದು ಮುಖ್ಯವಲ್ಲ, ಸಮಾಜಕ್ಕೆ ಸೇವೆ ಮಾಡುವುದು ಬಹಳ ಮುಖ್ಯ. ವಿದ್ಯಾರ್ಥಿಗಳು ಸಾಧನೆ ಮಾಡಿದಾಗ ತಂದೆ-ತಾಯಿಗಳಿಗಿಂತ ಹೆಚ್ಚು ಮೇಷ್ಟ್ರು ಸಂತೋಷ ಪಡುತ್ತಾರೆ’ ಎಂದು ಜಾನಪದ ತಜ್ಞ ಡಾ.ಎಂ.ಜಿ. ಈಶ್ವರಪ್ಪ ಹೇಳಿದರು.

‘ಎ.ವಿ.ಕೆ ಕಾಲೇಜು ತರಗತಿಗಳ ಪಾಠಕ್ಕೆ ಸೀಮಿತವಾಗದೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸುತ್ತಿದೆ. ವಿದ್ಯಾರ್ಥಿಗಳು ಯಾವುದನ್ನು ಓದಬೇಕು, ಯಾವುದನ್ನು ಓದಬಾರದು ಎನ್ನುವುದು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಬಹಳ ಮುಖ್ಯ’ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಪಿ. ಕುಮಾರ್ ತಿಳಿಸಿದರು.

ಐಕ್ಯೂಎಸಿ ಸಂಯೋಜಕ ಪ್ರೊ. ಶಿವಕುಮಾರ್ ಆರ್.ಆರ್. ಇದ್ದರು. ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಜಿ.ಜೆ. ನಾಗವೇಣಿ, ಸ್ವಾಗತಿಸಿದರು. ಸೈಯಿದ್ ಸಾನಿಯ ವಂದಿಸಿದರು. ಸಹನಾ ನಿರೂಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು