ದಾವಣಗೆರೆ: ‘ನಗರದಲ್ಲಿ ಸರ್ಕಾರಿ ನಿವೇಶನಗಳು ಖಾಲಿ ಇದ್ದರೆ, ಅವುಗಳನ್ನು ಕೂಡಲೇ ಸರ್ಕಾರಿ ಕಚೇರಿಗಳ ಉಪಯೋಗಕ್ಕೆ ನೀಡಬೇಕು’ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪ್ರಧಾನಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಕೊರತೆಯಾಗಬಾರದು. 100 ವಿದ್ಯಾರ್ಥಿಗಳು ವಾಸಿಸುವ ಕಟ್ಟಡಕ್ಕೆ ಬದಲಾಗಿ 400 ವಿದ್ಯಾರ್ಥಿಗಳು ವಾಸ ಮಾಡಲು ಸಾಧ್ಯವಾಗುವಂತಹ ಕಟ್ಟಡಗಳನ್ನು ನಿರ್ಮಿಸಬೇಕು. ಸ್ಮಶಾನಕ್ಕೆ ಜಾಗದ ಅವಶ್ಯಕತೆ ಇದ್ದರೆ ನೀಡಲಾಗುತ್ತದೆ’ ಎಂದು ಭರವಸೆ ನೀಡಿದರು.

‘ಅಲ್ಪಸಂಖ್ಯಾತ ಸಮುದಾಯದ ಜನರು ಅಧಿಕವಾಗಿ ವಾಸಿಸುತ್ತಿರುವ ತಾಲ್ಲೂಕುಗಳು ಮತ್ತು ಗ್ರಾಮಗಳಲ್ಲಿ ಅಂಗನವಾಡಿ ಕೇಂದ್ರಗಳನ್ನು ತೆರೆಯಬೇಕು. ಇದರಿಂದ ಯೋಜನೆಯ ಪ್ರಯೋಜನ ಆ ಸಮುದಾಯಕ್ಕೆ ದೊರೆಯಲಿದೆ’ ಎಂದರು.

‘ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಶಾಲೆ, ಕಾಲೇಜು ಹಾಗೂ ಅಂಗನವಾಡಿಗಳಿಗೆ ವಕ್ಫ್ ಬೋರ್ಡ್ ಅಥವಾ ಯಾವುದೇ ಇಲಾಖೆಯ ಅಧೀನದಲ್ಲಿನ ನಿವೇಶನಗಳನ್ನು ಗುರುತಿಸಬೇಕು. ಅಲ್ಲಿ ಶಾಲೆ, ಕಾಲೇಜುಗಳ ಕಟ್ಟಡಗಳನ್ನು ನಿರ್ಮಿಸಬೇಕು. ಅಲ್ಪಸಂಖ್ಯಾತ ಸಮುದಾಯಗಳಿಗೆ ಇಲಾಖೆಗಳಲ್ಲಿನ ಯೋಜನೆಗಳನ್ನು ಸಮರ್ಪಕವಾಗಿ ಒದಗಿಸುವ ಮೂಲಕ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು’ ಎಂದು ಹೇಳಿದರು.

ವಿವಿಧ ಇಲಾಖೆಯ ಅನುಪಾಲನಾ ವರದಿಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಭಕ್ತಮಾರ್ಕಂಡೇಶ್ವರ ಅವರು ಜಿಲ್ಲಾಧಿಕಾರಿಗೆ ಸಲ್ಲಿಸಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಮತಾ ಹೊಸಗೌಡ್ರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜಾನಾಯ್ಕ, ಡಿಡಿಪಿಐ ಕೊಟ್ರೇಶ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿರುವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.