ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾಧ್ವನಿ ಸಮಾವೇಶದಲ್ಲಿ ಮಕ್ಕಳ ಬಳಕೆ: ಪರಿಶೀಲನೆಗೆ ಸೂಚನೆ

Published 6 ಮೇ 2024, 4:44 IST
Last Updated 6 ಮೇ 2024, 4:44 IST
ಅಕ್ಷರ ಗಾತ್ರ

ದಾವಣಗೆರೆ: ಕಾಂಗ್ರೆಸ್ ವತಿಯಿಂದ ಶನಿವಾರ ಇಲ್ಲಿನ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಿದ್ದ ‘ಪ್ರಜಾಧ್ವನಿ–2’ ಸಮಾವೇಶದಲ್ಲಿ ಮಕ್ಕಳ ಬಳಕೆಯ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ವರದಿ ಕೇಳಿದೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಭಾಗವಹಿಸಿದ್ದ ಸಮಾವೇಶದಲ್ಲಿ ಗಾಂಧಿ ವೇಷಧಾರಿ ಜೊತೆ ಮಕ್ಕಳಿಗೆ ಕಾಂಗ್ರೆಸ್ ಬಾವುಟ ಹಿಡಿದು‌ ಆಯೋಜಕರು ನಿಲ್ಲಿಸಿದ್ದರು ಎಂಬ ಆರೋಪ ಕೇಳಿಬಂದಿದೆ.

‌‘ಪೂರ್ತಿ ವಿಡಿಯೊ ನೋಡಿ ಪರಿಶೀಲನೆ ಮಾಡಿ ಎಂದು ಸಹಾಯಕ ಚುನಾವಣಾಧಿಕಾರಿಗೆ ಸೂಚಿಸಲಾಗಿದೆ ತಿಳಿಸಲಾಗಿದೆ’ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ತಿಳಿಸಿದರು.

‘ಯಾವುದಕ್ಕೆ ಬಳಕೆ ಮಾಡಲಾಗಿದೆ ಎಂದು ಪೊಲೀಸರಿಂದ ವರದಿ ಕೇಳಲಾಗಿದೆ’ ಎಂದು ತಿಳಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT