ಗುರುವಾರ , ಅಕ್ಟೋಬರ್ 22, 2020
24 °C

ಉತ್ತರ ಪ್ರದೇಶ ಸರ್ಕಾರ ವಜಾಗೊಳಿಸಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಉತ್ತರ ಪ್ರದೇಶದ ಹಾಥರಸ್‌ನಲ್ಲಿ ಯುವತಿಯ ಮೇಲೆ ಅತ್ಯಾಚಾರ ನಡೆಸಿ 14 ದಿನಗಳ ವರೆಗೆ ಯಾವುದೇ ಕ್ರಮ ಕೈಗೊಳ್ಳದೇ ಸುಮ್ಮನಿದ್ದ ಯೋಗಿ ಆದಿತ್ಯಾನಾಥ ನೇತೃತ್ವದ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಜಿಲ್ಲಾ ವಾಲ್ಮಿಕಿ ನಾಯಕ ಸಮಾಜ ಆಗ್ರಹಿಸಿದೆ.

ಅತ್ಯಾಚಾರ ಮತ್ತು ಸಾವು ಖಂಡಿಸಿ ಮಂಗಳವಾರ ಇಲ್ಲಿನ ನಾಯಕ ಹಾಸ್ಟೆಲ್‌ ಬಳಿ ಪ್ರತಿಭಟನೆ ನಡೆಸಿದರು.

ಆರೋಪಿಗಳಾದ ರಾಮು, ಲವಕುಶ, ರವಿಗೆ ಕಠಿಣ ಶಿಕ್ಷೆ ವಿಧಿಸಿಬೇಕು. ಸರ್ಕಾರವನ್ನು ವಜಾ ಮಾಡುವುದರ ಜತೆಗೆ ಜಿಲ್ಲಾಧಿಕಾರಿ, ವೈದ್ಯಾಧಿಕಾರಿ, ಪೊಲೀಸ್‌ ಅಧಿಕಾರಿಯನ್ನು ಕೂಡಾ ವಜಾ ಮಾಡಬೇಕು. ಯುವತಿಯ ಕುಟುಂಬಕ್ಕೆ ಪರಿಹಾರ ಮತ್ತು ಭದ್ರತೆ ಒದಗಿಸಬೇಕು. ಕುಟುಂಬದ ಯಾರಿಗಾದರೂ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕೆ.ಎಚ್. ಓಬಳಪ್ಪ, ಹದಡಿ ಹಾಲೇಶಪ್ಪ, ಬಿ. ವೀರಣ್ಣ ಅವರೂ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು