ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರದ ನಿರ್ದೇಶನದಂತೆ ಲಸಿಕೆ: ಜಿಲ್ಲಾಧಿಕಾರಿ

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸ್ಪಷ್ಟನೆ
Last Updated 1 ಜುಲೈ 2021, 4:32 IST
ಅಕ್ಷರ ಗಾತ್ರ

ದಾವಣಗೆರೆ: ಜಿಲ್ಲಾ ವ್ಯಾಪ್ತಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಾರ್ಗಸೂಚಿಯ ಅನ್ವಯ ಹಂಚಿಕೆಯಾದ ಕೋವಿಡ್‌ ನಿರೋಧಕ ಲಸಿಕೆಯನ್ನು ವಾರಿಯರ್‌ಗಳಿಗೆ ಕಾಲಮಿತಿಯಂತೆ ಒಂದು ಮತ್ತು ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ಯಾರದ್ದೇ, ಯಾವುದೇ ಒತ್ತಡ ಬಂದಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸ್ಪಷ್ಟನೆ ನೀಡಿದ್ದಾರೆ.

45 ವರ್ಷ ಮೇಲಿನವರಿಗೆ ಮೊದಲನೇ ಡೋಸ್ ನಿಗದಿಪಡಿಸಿದ ಅವಧಿ ಪೂರ್ಣಗೊಂಡ ನಂತರ ಎರಡನೇ ನೀಡುವಲ್ಲಿ ಕ್ರಮ ವಹಿಸಲಾಗುತ್ತಿದೆ. ಕಾಲಕಾಲಕ್ಕೆ ಸ್ವೀಕೃತವಾಗುವ ಸರ್ಕಾರದ ನಿರ್ದೇಶನಗಳಂತೆ ಲಸಿಕೆ ನೀಡಲಾಗುತ್ತಿದೆ. ಒಂದು ಲಸಿಕಾ ಮೇಳವನ್ನು ನಡೆಸಲಾಗಿದೆ. ಸರ್ಕಾರದಿಂದ ಹಂಚಿಕೆಯಾದ ಲಸಿಕೆಗಳನ್ನು ಬ್ಯಾನರ್‌ನಡಿ ಆಯೋಜಿಸಿ ನೀಡಲು ಮಾರ್ಗಸೂಚಿಯಲ್ಲಿ ಅವಕಾಶವಿಲ್ಲ. ಈ ವಿಚಾರದಲ್ಲಿ ಜಿಲ್ಲಾಡಳಿತಕ್ಕೆ, ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಯಾವುದೇ ರೀತಿಯ ಒತ್ತಡ, ಶಿಫಾರಸು ಬಂದಿಲ್ಲ ಎಂದು ತಿಳಿಸಿದ್ದಾರೆ.

ಜಿಲ್ಲಾಡಳಿತವು ಮುಂಬರುವ ದಿನಗಳಲ್ಲಿ ಜಿಲ್ಲೆಯ ಲಸಿಕೆ ಬೇಡಿಕೆಯಂತೆ ಸರ್ಕಾರದ ನ್ಯಾಯಸಮ್ಮತವಾಗಿ ನಡೆಸಲಾಗುವುದು. ಜಿಲ್ಲೆಯ ಜನಪ್ರತಿನಿಧಿಗಳು, ಗಣ್ಯರು ಹಾಗೂ ನಾಗರಿಕರು ಜಿಲ್ಲಾಡಳಿತಕ್ಕೆ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಹೇಳಿಕೆ ಮೂಲಕ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT