ದಾವಣಗೆರೆ: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಪದಚ್ಯುತ ಪೀಠಾಧ್ಯಕ್ಷ ವಚನಾನಂದ ಸ್ವಾಮೀಜಿ ಅವರಿಗೆ ಪೋಕ್ಸೊ ಪ್ರಕರಣದಲ್ಲಿ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಕೋರಿ ಗ್ರಾಮಾಂತರ ಠಾಣೆಯ ಪೊಲೀಸರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಜಿಲ್ಲಾ ವಿಶೇಷ ಪೋಕ್ಸೊ ನ್ಯಾಯಾಲಯ ಜೂನ್ 6ಕ್ಕೆ ಮುಂದೂಡಿದೆ.

ಪೊಲೀಸರ ಅರ್ಜಿಗೆ ತಕರಾರು ಸಲ್ಲಿಸಿದ್ದ ಸ್ವಾಮೀಜಿ ಪರ ವಕೀಲ ಎಸ್.ವಿ. ಪಾಟೀಲ, ವಿಚಾರಣೆಗೆ ಹೆಚ್ಚಿನ ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಈ ಕೋರಿಕೆಯನ್ನು ಬುಧವಾರ ಪುರಸ್ಕರಿಸಿದ ನ್ಯಾಯಾಧೀಶ ಶ್ರೀರಾಮ ನಾರಾಯಣ ಹೆಗಡೆ ಅವರು ವಿಚಾರಣೆ ಮುಂದೂಡಿದರು.

‘ಸ್ವಾಮೀಜಿ ಬಲವಂತವಾಗಿ ಮಸಾಜ್ ಮಾಡಿಸಿಕೊಳ್ಳುತ್ತಿದ್ದರು’ ಎಂಬ ಗುರುಪೀಠದ ವಸತಿ ಶಾಲೆಯ ವಿದ್ಯಾರ್ಥಿಯೊಬ್ಬರ ದೂರು ಆಧರಿಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದಕ್ಕೂ ಮುನ್ನವೇ ವಚನಾನಂದ ಸ್ವಾಮೀಜಿ ನಿರೀಕ್ಷಣಾ ಜಾಮೀನು ಪಡೆದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.