ದಾವಣಗೆರೆ: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಪದಚ್ಯುತ ಪೀಠಾಧ್ಯಕ್ಷ ವಚನಾನಂದ ಸ್ವಾಮೀಜಿ ವಸತಿ ನಿಲಯದ ಮಕ್ಕಳನ್ನು ದುರ್ಬಳಕೆ ಮಾಡಿಕೊಂಡು ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ತನಿಖಾಧಿಕಾರಿಯಾಗಿದ್ದ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಮಂಜುಳಾ ಡಿ. ಅವರನ್ನು ವರ್ಗಾವಣೆ ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಟಿ.ಶೇಖರ್ ಆದೇಶಿಸಿದ್ದಾರೆ.

‘ಪಿಎಸ್ಐ ಮಂಜುಳಾ ಅವರ ಲಿಖಿತ ಮನವಿಯನ್ನು ಪರಿಗಣಿಸಿ ಆಡಳಿತಾತ್ಮಕ ಕಾರಣಗಳಿಗಾಗಿ ವರ್ಗಾವಣೆ ಮಾಡಲಾಗಿದೆ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಮಂಜುಳಾ ಅವರನ್ನು ಆಜಾದ್ನಗರ ಪೊಲೀಸ್ ಠಾಣೆಗೆ (ತನಿಖಾ ವಿಭಾಗ) ವರ್ಗಾಯಿಸಲಾಗಿದೆ. ಈ ಸ್ಥಾನದಲ್ಲಿದ್ದ ಜಯರತ್ನಮ್ಮ ಅವರನ್ನು ಇದೇ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.

‘ಪಿಎಸ್ಐ ಮಂಜುಳಾ ಅವರು ಪೋಕ್ಸೊ ಪ್ರಕರಣದ ತನಿಖೆಯ ಜವಾಬ್ದಾರಿಯಿಂದ ಕೈಬಿಡುವಂತೆ ಕೋರಿದ್ದರು. ವಚನಾನಂದ ಸ್ವಾಮೀಜಿ ವಸತಿ ನಿಲಯದ ಮಕ್ಕಳನ್ನು ದುರ್ಬಳಕೆ ಮಾಡಿಕೊಂಡು ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ಹರಿಹರ ಗ್ರಾಮಾಂತರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಸುರೇಶ್ ಸಗರಿ ಅವರಿಗೆ ವಹಿಸಲಾಗಿದೆ. ಅವರು ಈಗಾಗಲೇ ತನಿಖೆ ಆರಂಭಿಸಿದ್ದಾರೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಟಿ.ಶೇಖರ್ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ವಸತಿ ನಿಲಯದ ಸಿಬ್ಬಂದಿಯ ವಿಚಾರಣೆ...

ವಚನಾನಂದ ಸ್ವಾಮೀಜಿ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಸತಿ ನಿಲಯದಲ್ಲಿ ಕಾರ್ಯನಿರ್ವಹಿಸಿದ್ದ ಸಿಬ್ಬಂದಿಯನ್ನು ಪೊಲೀಸರು ಮಂಗಳವಾರ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ವಚನಾನಂದ ಸ್ವಾಮೀಜಿ ವಸತಿ ನಿಲಯದ ಮಕ್ಕಳನ್ನು ದುರ್ಬಳಕೆ ಮಾಡಿಕೊಂಡು ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಿಸಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯೂಸಿ) ಪೊಲೀಸರಿಗೆ ವರದಿ ನೀಡಿದ ಬೆನ್ನಲ್ಲೇ ತನಿಖೆ ಚುರುಕುಗೊಂಡಿದೆ. ಈಗಾಗಲೇ ವಸತಿ ನಿಲಯದಲ್ಲಿದ್ದ ವಿದ್ಯಾರ್ಥಿಗಳ ಹೇಳಿಕೆಗಳನ್ನು ತನಿಖಾಧಿಕಾರಿ ದಾಖಲಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.