ದಾವಣಗೆರೆ: ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಪದಚ್ಯುತ ಪೀಠಾಧ್ಯಕ್ಷ ವಚನಾನಂದ ಸ್ವಾಮೀಜಿ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಾಂತರ ಠಾಣೆಯ ಪೊಲೀಸರು ಗುರುವಾರ ಸುದೀರ್ಘ ವಿಚಾರಣೆ ನಡೆಸಿದರು.

ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ಸ್ವಾಮೀಜಿಗೆ ನೋಟಿಸ್ ನೀಡಿದ್ದರು. ಬೆಳಿಗ್ಗೆ 10ಕ್ಕೆ ಠಾಣೆಗೆ ಬಂದ ಸ್ವಾಮೀಜಿ ಅವರನ್ನು ಪೊಲೀಸರು ಮಧ್ಯಾಹ್ನ 2 ಗಂಟೆಯವರೆಗೂ ವಿಚಾರಣೆ ನಡೆಸಿದರು. ಹಲವು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದರು.

ಮಧ್ಯಾಹ್ನದ ಊಟ ಮುಗಿಸಿದ ಬಳಿಕ ಆಸ್ಪತ್ರೆಗೆ ಕರೆತರಲಾಯಿತು. ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಾಮೀಜಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ. ರಕ್ತದ ಮಾದರಿ ಪಡೆಯಲಾಗುತ್ತಿದೆ.

16 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಘಟನೆ ನಡೆದ ಸ್ಥಳದ ವ್ಯಾಪ್ತಿಯ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ಪ್ರಕರಣ ವರ್ಗಾವಣೆ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.