ಹರಿಹರ: ಇಲ್ಲಿನ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಪದಚ್ಯುತ ಪೀಠಾಧಿಪತಿ ವಚನಾನಂದ ಸ್ವಾಮೀಜಿ ವಿರುದ್ಧದ ಪೋಕ್ಸೊ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಗ್ರಾಮಾಂತರ ಠಾಣೆ ಪೊಲೀಸರು, ಮೇ 25 ರಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದಾರೆ.

ಪ್ರಕರಣ ದಾಖಲಾಗುವುದಕ್ಕೂ ಮುನ್ನವೇ ಸ್ವಾಮೀಜಿ ಪಡೆದಿರುವ ನಿರೀಕ್ಷಣಾ ಜಾಮೀನು ರದ್ದುಪಡಿಸುವಂತೆ ಕೋರಿ ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 14 ಹಾಗೂ ಮೇ 18 ರಂದು ವಿಚಾರಣೆ ನಡೆಸಲಾಗಿತ್ತು.

‘ಈಗಾಗಲೇ ಎರಡು ಬಾರಿ ಸ್ವಾಮೀಜಿ ವಿಚಾರಣೆಗೆ ಹಾಜರಾಗಿದ್ದಾರೆ. ಪ್ರತಿ ಬಾರಿ ನಾಲ್ಕೈದು ಗಂಟೆ ವಿಚಾರಣೆ ನಡೆಸಿರುವ ಪೊಲೀಸರು, ನೋಟಿಸ್ ನೀಡಿರುವುದು ಸರಿಯಲ್ಲ. ಇದರ ಹಿಂದೆ ರಾಜಕೀಯ ಅಥವಾ ಬಾಹ್ಯ ಒತ್ತಡಗಳಿರುವ ಅನುಮಾನವಿದೆ’ ಎಂದು ಸ್ವಾಮೀಜಿ ಪರ ವಕೀಲ ಎಸ್.ವಿ. ಪಾಟೀಲ್ ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.