ದಾವಣಗೆರೆ: ‘ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಂದ ಸ್ಫೂರ್ತಿಗೊಂಡು ರಾಜಕೀಯ ಕ್ಷೇತ್ರ ಆಯ್ಕೆ ಮಾಡಿಕೊಂಡೆ’ ಎಂದು ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ಅಭಿಪ್ರಾಯ ವ್ಯಕ್ತಪಡಿಸಿದರು.

ಇಲ್ಲಿನ ಸೋಮೇಶ್ವರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಸೋಮೇಶ್ವರ ಸಮೂಹ ಸಂಸ್ಥೆ, ಎಸ್.ಎ. ರವೀಂದ್ರನಾಥ್ ಅಭಿಮಾನಿ ಬಳಗದ ವತಿಯಿಂದ ಶನಿವಾರ ಏರ್ಪಡಿಸಿದ್ದ ‘ಸನಾತನಿ ನೃತ್ಯ ರೂಪಕ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ರಾಜಕಾರಣಕ್ಕೆ ಬಂದ ಬಳಿಕ ಬಿಜೆಪಿ ಸಂಘಟನೆಗೆ ಶಕ್ತಿಮೀರಿ ಶ್ರಮಿಸಿದ್ದೇನೆ. ಕೆಲವರು ರಾಜಕಾರಣಕ್ಕೆ ಬಂದು ಆಸ್ತಿ ಕಳೆದುಕೊಂಡಿರುವುದಾಗಿ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ನಾನು ಏನನ್ನೂ ಕಳೆದುಕೊಂಡಿಲ್ಲ. ಸ್ವಚ್ಛ ಹಾಗೂ ಪ್ರಾಮಾಣಿಕ ರಾಜಕಾರಣ ಮಾಡಿದ್ದೇನೆ’ ಎಂದು ಹೇಳಿದರು.

‘ರವೀಂದ್ರನಾಥ್ ಅವರು ರೈತರಿಗಾಗಿ ಸಾಕಷ್ಟು ಶ್ರಮಿಸಿದ್ದಾರೆ. ರೈತಪರ ಹೋರಾಟದಲ್ಲಿ ಸದಾ ತೊಡಗಿಸಿಕೊಂಡಿದ್ದಾರೆ. ಕಪ್ಪುಚುಕ್ಕೆ ಇಲ್ಲದ ಸ್ವಚ್ಛ ರಾಜಕೀಯ ಜೀವನ ನಡೆಸಿದ್ದಾರೆ’ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಮೆಚ್ಚುಗೆ ವ್ಯಕ್ತಪಡಿಸಿದರು.

ಧಾರವಾಡದ ಕಲಾ ಸುಜಯ ಸಂಸ್ಥೆಯ ಕಲಾವಿದರು ಸನಾತನಿ ನೃತ್ಯರೂಪಕ ಪ್ರದರ್ಶಿಸಿದರು. ವಿಧಾನಪರಿಷತ್ ಮಾಜಿ ಸದಸ್ಯ ಡಾ.ಎ.ಎಚ್. ಶಿವಯೋಗಿಸ್ವಾಮಿ, ಮಾಜಿ ಶಾಸಕರಾದ ಎಸ್.ವಿ. ರಾಮಚಂದ್ರ, ಮಾಡಾಳು ವಿರೂಪಾಕ್ಷಪ್ಪ, ಎಂ. ಬಸವರಾಜ ನಾಯ್ಕ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್. ರಾಜಶೇಖರ್, ಮುಖಂಡರಾದ ಲೋಕಿಕೆರೆ ನಾಗರಾಜ್, ಬಿ.ಎಂ. ಸತೀಶ್ ಕೊಳೇನಹಳ್ಳಿ, ವೈದ್ಯ ಮಧುಕೇಶವ ಹೆಗಡೆ, ಸೋಮೇಶ್ವರ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಕೆ.ಎಂ. ಸುರೇಶ್ ಹಾಜರಿದ್ದರು.

ಅವಕಾಶ ಒತ್ತಡ ಸೃಷ್ಟಿಯಾದರೂ ರವೀಂದ್ರನಾಥ್ ಅವರು ಬಿಜೆಪಿ ತೊರೆಯಲಿಲ್ಲ. ಧರ್ಮ ಪರಂಪರೆ ರಕ್ಷಣೆ ಹಾಗೂ ರೈತಪರ ಹೋರಾಟಕ್ಕೆ ಅವರು ಮಾದರಿ
ಹಾರಿಕ ಮಂಜುನಾಥ್ ವಾಗ್ಮಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.