ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಲ್ಮೀಕಿ ಮಾನವೀಯ ಮೌಲ್ಯದ ಗುರು: ಶಾಸಕ ಬಸವರಾಜು ವಿ. ಶಿವಗಂಗಾ

ಚನ್ನಗಿರಿ ತಾಲ್ಲೂಕು ಆಡಳಿತದಿಂದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ
Published 29 ಅಕ್ಟೋಬರ್ 2023, 5:31 IST
Last Updated 29 ಅಕ್ಟೋಬರ್ 2023, 5:31 IST
ಅಕ್ಷರ ಗಾತ್ರ

ಚನ್ನಗಿರಿ: ‘ರಾಮಾಯಣದಂತಹ ಪವಿತ್ರವಾದ ಗ್ರಂಥವನ್ನು ರಚಿಸಿದ ಮಹಾನ್ ಕವಿ ವಾಲ್ಮೀಕಿ ಅವರ ಆದರ್ಶ, ತತ್ವ, ಸಿದ್ಧಾಂತಗಳನ್ನು ನಮ್ಮ ಜೀವನದಲ್ಲೂ ಅಳವಡಿಸಿಕೊಳ್ಳಬೇಕು’ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ತಿಳಿಸಿದರು.

ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ತಾಲ್ಲೂಕು ಆಡಳಿತದಿಂದ ನಡೆದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವಾಲ್ಮೀಕಿ ಪುತ್ಥಳಿ ಮರು ಪ್ರತಿಷ್ಠಾಪನೆ ಸಂಬಂಧ ಮಾತುಕತೆ ನಡೆಸಲು ನಾನು ಸಿದ್ಧನಿದ್ದೇನೆ. ವಾಲ್ಮೀಕಿ ಅವರು ಎಲ್ಲ ವರ್ಗದವರಿಗೂ ಬೇಕಾಗಿದ್ದು, ಪುತ್ಥಳಿ ಮರು ಪ್ರತಿಷ್ಠಾಪನೆ ಕಾನೂನಾತ್ಮಕವಾಗಿ ಆಗಬೇಕು ಎಂದರು.

ನಾಯಕ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಹೊದಿಗೆರೆ ರಮೇಶ್ ಮಾತನಾಡಿ, ‘ವಾಲ್ಮೀಕಿ ಪುತ್ಥಳಿ ಮರು ಪ್ರತಿಷ್ಠಾಪನೆ ವಿಷಯ ಜಿಲ್ಲಾಧಿಕಾರಿ ಅವರ ಅಂಗಳದಲ್ಲಿದೆ. ಅವರಿಗೆ 40 ದಿನಗಳ ಗಡುವನ್ನು ನೀಡಿದ್ದು, ಅಷ್ಟರೊಳಗೆ ಬೇಡಿಕೆಯನ್ನು ಈಡೇರಿಸಬೇಕು’ ಎಂದು ಆಗ್ರಹಿಸಿದರು.

ತಹಶೀಲ್ದಾರ್ ಪಿ.ಎಸ್. ಎರ್ರಿಸ್ವಾಮಿ, ತಾಲ್ಲೂಕು ಪಂಚಾಯಿತಿ ಇಒ ಬಿ.ಕೆ. ಉತ್ತಮ, ಬಿಇಒ ಎಲ್. ಜಯಪ್ಪ, ನಾಯಕ ಸಮಾಜದ ಮುಖಂಡರಾದ ಗಾದ್ರಿ ರಾಜು, ಎನ್. ಲೋಕೇಶ್, ಹಿರಿಯ ವಕೀಲ ರಾಮಚಂದ್ರಮೂರ್ತಿ, ನಗರ ಘಟಕದ ಅಧ್ಯಕ್ಷ ಜಯರಾಂ, ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಘಟಕದ ಅಧ್ಯಕ್ಷ ಎನ್. ತಿಪ್ಪೇಶಪ್ಪ, ಪುರಸಭೆ ಉಪಾಧ್ಯಕ್ಷೆ ಜರೀನಾಬೀ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಿ.ಎಸ್. ರುದ್ರೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT