ಶನಿವಾರ, ಜುಲೈ 31, 2021
20 °C
ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿಕೆ

ಯಡಿಯೂರಪ್ಪರಿಗೆ ವೀರಶೈವ ಮಹಾಸಭಾ ಬೆಂಬಲ: ಶಾಮನೂರು ಶಿವಶಂಕರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ‘ಮುಖ್ಯಮಂತ್ರಿಯಾಗಿ ಮುಂದುವರಿಯಲು ಬಿ.ಎಸ್‌.ಯಡಿಯೂರಪ್ಪ ಅವರಿಗೆ ಅಖಿಲ ಭಾರತ ವೀರಶೈವ ಮಹಾಸಭಾ ಸಂಪೂರ್ಣ ಬೆಂಬಲ ನೀಡಲಿದೆ’ ಎಂದು ಕಾಂಗ್ರೆಸ್‌ನ ಹಿರಿಯ ಶಾಸಕರೂ ಆಗಿರುವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಸ್ತುತ ಸಂದರ್ಭದಲ್ಲಿ ಕೊರೊನಾ ತಡೆಯೇ ಮುಖ್ಯ. ಆದರೂ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆ ನಡೆಯುತ್ತಿರುವ ಕಾರಣ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮಹಾಸಭಾ ಬೆಂಬಲ ನೀಡುತ್ತದೆ ಎಂದು ಹಿಂದೆಯೂ ಹೇಳಿದ್ದೆವು. ಈಗಲೂ ಬೆಂಬಲ ನೀಡಲಿದೆ’ ಎಂದು ಸ್ಪಷ್ಟಪಡಿಸಿದರು.

ಯಡಿಯೂರಪ್ಪ ಅವರಿಗೆ ಮಠಾಧೀಶರ ಪರಿಷತ್‌ ಬೆಂಬಲ ನೀಡಿದೆಯಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಮಠಾಧೀಶರು ದೊಡ್ಡವರು. ಅವರ ಬಗ್ಗೆ ಮಾತನಾಡುವುದಿಲ್ಲ. ಬೇರೆ ವಿಷಯ ಗೊತ್ತಿಲ್ಲ. ಮಹಾಸಭಾದ ಬೆಂಬಲ ಯಡಿಯೂರಪ್ಪ ಅವರಿಗೆ ಇರುತ್ತದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು