ಹಿರಿಯ ರಾಜಕಾರಣಿ, ದೀರ್ಘಕಾಲ ಶಾಸಕನಾಗಿ ಸೇವೆ ಸಲ್ಲಿಸಿದ್ದ ಡಾ. ಶಾಮನೂರು ಶಿವಶಂಕರಪ್ಪ ಅವರು ಡಿ.14ರಂದು ನಿಧನರಾಗಿದ್ದಾರೆ. ಕುಟುಂಬಸ್ಥರು, ರಾಜಕೀಯ ಗಣ್ಯರು, ವಿವಿಧ ಮಠಾಧೀಶರು ಹಾಗೂ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಆಗಮಿಸಿ ಶಾಮನೂರು ಶಿವಶಂಕರಪ್ಪ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ ಅವರು ಶಿವಶಂಕರಪ್ಪ ಅವರ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಶಾಮನೂರು ಶಿವಂಶಕರಪ್ಪ ಅವರು ಜೀವಿತಾವಧಿಯಲ್ಲಿ ಮಾಡಿದ್ದ ಒಳ್ಳೆಯ ಕೆಲಸಗಳನ್ನು ನೆನಪಿಸಿಕೊಂಡು ಸಂತಾಪ ಸೂಚಿಸಿದ್ದಾರೆ.
.ಶಾಮನೂರು ಶಿವಶಂಕರಪ್ಪ ನಿಧನ:ಕಲ್ಲೇಶ್ವರ ಮಿಲ್ ಆವರಣದಲ್ಲಿ ಇಂದು ಸಂಜೆ ಅಂತ್ಯಕ್ರಿಯೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.