ದಾವಣಗೆರೆ: ಚುನಾವಣೆಯಲ್ಲಿ ಅಲ್ಪಸಂಖ್ಯಾತರನ್ನು ಮತಬ್ಯಾಂಕ್ ರೀತಿ ಬಳಸಿಕೊಳ್ಳುವ ಕಾಂಗ್ರೆಸ್, ಇಡೀ ಸಮುದಾಯವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಈ ಸತ್ಯಾಂಶ ಅಲ್ಪಸಂಖ್ಯಾತರಿಗೂ ಅರ್ಥವಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.

‘ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್, ಅಭಿವೃದ್ಧಿಯ ಜೊತೆಗೆ ಅಲ್ಪಸಂಖ್ಯಾತರನ್ನು ಕೂಡ ಮರೆತಿದೆ. ಇದರ ಪರಿಣಾಮ ಉಪಚುನಾವಣಾ ಕಣದಲ್ಲಿ ಗೊತ್ತಾಗುತ್ತಿದೆ. ಈಗ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್ ಮುಖಂಡರು ಮುಸ್ಲಿಮರ ಮನವೊಲಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

‘ಪ್ರಧಾನಿ ನರೇಂದ್ರ ಮೋದಿ ಅವರ ‘ಸಬ್ ಕಾ ಸಾತ್, ಸಬ್ ಕಾ ವಿಕಾಸ್’ ಮೇಲೆ ನಂಬಿಕೆ ಇಟ್ಟುಕೊಂಡಿರುವ ಬಿಜೆಪಿ, ದೇಶದ ಅಭಿವೃದ್ಧಿಗೆ ಎಲ್ಲರನ್ನೂ ಒಳಗೊಳ್ಳಲು ಪ್ರಯತ್ನಿಸುತ್ತಿದೆ. ಹಿಂದೂಗಳ ಜೊತೆಗೆ ಅಲ್ಪಸಂಖ್ಯಾತರು ಕೈಜೋಡಿಸಿದಾಗ ದೇಶ ಅಭಿವೃದ್ಧಿಪಥದಲ್ಲಿ ಸಾಗಲಿದೆ. ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯದಲ್ಲಿ ‘ಹಜ್ಭವನ’ಗಳನ್ನು ನಿರ್ಮಿಸಿದೆ. ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಯಾವ ಕೊಡುಗೆ ನೀಡಿದೆ’ ಎಂದು ಪ್ರಶ್ನಿಸಿದರು.

‘ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಸುದೀರ್ಘವಾಗಿ ಕಾಂಗ್ರೆಸ್ ಹಿಡಿತದಲ್ಲಿದೆ. ಮತದಾರರು ಕಾಂಗ್ರೆಸ್ಗೆ ನಿರಂತರವಾಗಿ ಆಶೀರ್ವಾದ ಮಾಡಿದ್ದರೂ ಕ್ಷೇತ್ರವನ್ನು ಅಭಿವೃದ್ಧಿಪಡಿಸಿಲ್ಲ. ಈ ಬಗ್ಗೆ ಮತದಾರರಲ್ಲಿ ಬೇಸರವಿದೆ. ಈ ಬಾರಿ ಬದಲಾವಣೆ ಬಯಸಿರುವ ಮತದಾರರು, ಹಣಬಲ ಮತ್ತು ತೋಳ್ಬಲ ಲೆಕ್ಕಿಸದೇ ಬಿಜೆಪಿ ಬೆಂಬಲಿಸಲು ಮುಂದಾಗಿದ್ದಾರೆ. ಪಕ್ಷದ ಸಾಮಾನ್ಯ ಕಾರ್ಯಕರ್ತ ಟಿ.ಶ್ರೀನಿವಾಸ ದಾಸಕರಿಯಪ್ಪ ವಿಜೇತರಾಗಲಿದ್ದಾರೆ’ ಎಂದರು.

‘ದೇವರಾಜ ಅರಸು ದಾಖಲೆ ಮುರಿದಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೀಗುತ್ತಿದ್ದಾರೆ. 17 ಬಜೆಟ್ ಮಂಡನೆ ಮಾಡಿ ದಾಖಲೆ ನಿರ್ಮಿಸಿರುವ ಹೆಮ್ಮೆಯಲ್ಲಿದ್ದಾರೆ. ಸಿದ್ದರಾಮಯ್ಯ ಅವರ ಇಂತಹ ದಾಖಲೆಗಳಿಂದ ರಾಜ್ಯದ ಜನರಿಗೆ, ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಪ್ರಯೋಜನವಾಗಿಲ್ಲ. ಇಂತಹ ಬಜೆಟ್ಗಳಿಂದ ರಾಜ್ಯ ಅಭಿವೃದ್ಧಿಯನ್ನೂ ಕಂಡಿಲ್ಲ’ ಎಂದು ಕುಟುಕಿದರು.

ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ, ಶಾಸಕ ಬಿ.ಪಿ.ಹರೀಶ್, ಮಾಜಿ ಸಚಿವ ಶಿವನಗೌಡ ನಾಯಕ, ವಿಧಾನಪರಿಷತ್ ಮಾಜಿ ಸದಸ್ಯ ಶಿವಯೋಗಿಸ್ವಾಮಿ, ಬಿಜೆಪಿ ಮುಖಂಡರಾದ ಗಾಯತ್ರಿ ಸಿದ್ದೇಶ್ವರ, ನರೇಂದ್ರ ರಂಗಪ್ಪ, ಎನ್.ರಾಜಶೇಖರ್, ಕೋಳೆನಹಳ್ಳಿ ಬಿ.ಎಂ. ಸತೀಶ್ ಹಾಜರಿದ್ದರು.

‘ರಾಜಕಾರಣದ ದಿಕ್ಕು ಬದಾಗಲಿದೆ’

‘ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜ್ಯ ರಾಜಕಾರಣದ ದಿಕ್ಕು ಬದಲಿಸುವ ಶಕ್ತಿ ಹೊಂದಿವೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅಭಿಪ್ರಾಯಪಟ್ಟರು.

‘ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಐತಿಹಾಸಿಕ ದಾಖಲೆ ಬರೆಯಲಿದೆ. ಬಿಜೆಪಿ ಆಯ್ಕೆಯಾದರೆ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿ ಎಲ್ಲ ಸಮುದಾಯಗಳಿಗೆ ಅನುಕೂಲ ಆಗಲಿದೆ ಎಂಬ ಭಾವನೆ ಮೂಡಿದೆ’ ಎಂದರು.

‘ಚುನಾವಣೆ ಬಳಿಕ ಮಣಿಯುವ ಸಿಎಂ’

‘ಪಂಚರಾಜ್ಯ ಚುನಾವಣೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್ಗೆ ಮಣಿಯಲಿದ್ದಾರೆ. ಮುಖ್ಯಮಂತ್ರಿಯಾಗಿ ಅವರು ಬಹುದಿನಗಳ ಕಾಲ ಮುಂದುವರಿಯಲು ಸಾಧ್ಯವಿಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

‘ಐದು ರಾಜ್ಯಗಳ ಚುನಾವಣೆ ಮುಗಿದ ವಾರದಲ್ಲೇ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಗೋಚರಿಸಲಿದೆ. ಇದಕ್ಕೆ ಇನ್ನೂ ಬಹುದಿನ ಕಾಯಬೇಕಾಗಿಲ್ಲ. ಸದನದಲ್ಲಿ ಮುಖ್ಯಮಂತ್ರಿ ನೀಡಿದ ಉತ್ತರದಲ್ಲಿಯೇ ಇದರ ಸುಳಿವು ಇದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

ಬಿಜೆಪಿಯಲ್ಲಿ ಆರಂಭದಲ್ಲಿ ಗೊಂದಲವಿತ್ತು. ವರಿಷ್ಠರು ಅಭ್ಯರ್ಥಿ ಘೋಷಿಸಿದ ಬಳಿಕ ಕಾರ್ಯಕರ್ತರು, ಮುಖಂಡರು ಒಗ್ಗೂಡಿದ್ದಾರೆ. ಅಭ್ಯರ್ಥಿ ಗೆಲುವಿಗೆ ಅವಿರತವಾಗಿ ಶ್ರಮಿಸುತ್ತಿದ್ದಾರೆ
ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.