ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವಿಲೇಹಾಳ: ಗ್ರಾಮ ಲೆಕ್ಕಾಧಿಕಾರಿಗೆ 2 ವರ್ಷ ಶಿಕ್ಷೆ

10 ವರ್ಷಗಳ ಹಿಂದೆ ಲಂಚ ಪಡೆದ ಪ್ರಕರಣ
Last Updated 22 ಫೆಬ್ರುವರಿ 2021, 14:24 IST
ಅಕ್ಷರ ಗಾತ್ರ

ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ನವಿಲೇಹಾಳ ಗ್ರಾಮದಲ್ಲಿ ಹತ್ತು ವರ್ಷಗಳ ಹಿಂದೆ ಲಂಚ ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮ ಲೆಕ್ಕಾಧಿಕಾರಿ ತಿಪ್ಪೇಸ್ವಾಮಿಗೆ ಎರಡು ವರ್ಷ ಶಿಕ್ಷೆ ಹಾಗೂ ₹ 20 ಸಾವಿರ ದಂಡವನ್ನು ದಾವಣಗೆರೆ ಜಿಲ್ಲಾ ಮತ್ತು ಸೆಷನ್ಸ್‌ ಹಾಗೂ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಬಿ. ಗೀತಾ ಅವರು ವಿಧಿಸಿ ಸೋಮವಾರ ಆದೇಶಿಸಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮ ಸಹಾಯಕ ಜಗದೀಶ್‌ಗೆ ಒಂದು ವರ್ಷ ಶಿಕ್ಷೆ ಹಾಗೂ ₹ 10 ಸಾವಿರ ದಂಡವನ್ನೂ ವಿಧಿಸಲಾಗಿದೆ.

2010ರಲ್ಲಿ ನವಿಲೇಹಾಳ ಗ್ರಾಮದ ಗೋವರ್ಧನ ಗಿರಿಶ್ಯಾಮ್‌ ಅವರಿಗೆ ವಾರಸಾ ಪ್ರಮಾಣಪತ್ರ ನೀಡಲು ₹ 2,000 ಲಂಚ ಪಡೆಯುತ್ತಿದ್ದಾಗ ಅಪರಾಧಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದರು. 2012ರಲ್ಲಿ ಪ್ರಕರಣವುನ್ಯಾಯಾಲಯದಲ್ಲಿ ದಾಖಲಾಗಿತ್ತು.

ಸರ್ಕಾರದ ಪರವಾಗಿ ಲೋಕಾಯುಕ್ತ ವಿಶೇಷ ಅಭಿಯೋಜಕ ಪಿ.ವೈ. ಹಾದಿಮನಿ ಅವರು ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT