ಬುಧವಾರ, ಜನವರಿ 27, 2021
16 °C

ಗಾಯಾಳುಗಳ ನೆರವಾದ ಗ್ರಾಮ ಲೆಕ್ಕಾಧಿಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊನ್ನಾಳಿ: ತಾಲ್ಲೂಕಿನ ಅರಬಗಟ್ಟೆ ಗ್ರಾಮದ ಹೊರವಲಯದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಒದ್ದಾಡುತ್ತಿದ್ದ ನಾಲ್ವರನ್ನು ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಉಪಚರಿಸಿ ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಬೈಕ್‍ಗಳ ಮುಖಾಮುಖಿ ಡಿಕ್ಕಿಯಾಗಿ ತಾಲ್ಲೂಕಿನ ಮುಕ್ತೇನ
ಹಳ್ಳಿ ಗ್ರಾಮದ ನೀರಗಂಟಿ ಪ್ರಕಾಶ್, ರಾಂಪುರ ಗ್ರಾಮದ ಹಾಲೇಶ್ ಮತ್ತು ನ್ಯಾಮತಿ ತಾಲ್ಲೂಕಿನ ಕುಂಕುವ ಗ್ರಾಮದ ಚರಣ್, ಚಂದ್ರು ಗಾಯಗೊಂಡು ಒದ್ದಾಡುತ್ತಿದ್ದರು. ಅದೇ ಮಾರ್ಗದಲ್ಲಿ ಕಾರಿನಲ್ಲಿ ಸ್ವಗ್ರಾಮ ಅರಬಗಟ್ಟೆಗೆ ತೆರಳುತ್ತಿದ್ದ ನ್ಯಾಮತಿ ತಾಲ್ಲೂಕಿನ ಸವಳಂಗ ವೃತ್ತದ ಗ್ರಾಮ ಲೆಕ್ಕಾಧಿಕಾರಿ ಕೆ.ಜಿ. ಗಣೇಶ್ ಅವರು ತಕ್ಷಣ ಗಾಯಾಳುಗಳ ಸಹಾಯಕ್ಕೆ ಧಾವಿಸಿದರು.

ಕರವಸ್ತ್ರ ಮತ್ತು ಹತ್ತಿಯಿಂದ ಗಾಯಗಳಿಗೆ ಕಟ್ಟುವ ಮೂಲಕ ರಕ್ತಸ್ರಾವ ಆಗದಂತೆ ತಡೆಗಟ್ಟಿದರು. ಬಳಿಕ 108 ತುರ್ತು ಚಿಕಿತ್ಸಾ ವಾಹನಕ್ಕೆ ಕರೆ ಮಾಡಿ ಗಾಯಾಳುಗಳನ್ನು ಹೊನ್ನಾಳಿಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರು.

ಹೊನ್ನಾಳಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹಾಲೇಶ್‍ ಅವರನ್ನು ಶಿವಮೊಗ್ಗದ ಮೆಟ್ರೊ ಆಸ್ಪತ್ರೆಗೆ, ಚಂದ್ರು ಅವರನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ಹಾಗೂ ಚರಣ್ ಅವರನ್ನು ಬೆಂಗಳೂರಿನ ನಿಮ್ಹಾನ್ಸ್‌ಗೆ ಕಳುಹಿಸಲಾಗಿದೆ.  ನೀರಗಂಟಿ ಪ್ರಕಾಶ್ ಅವರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ನಂತರ ಮಂಗಳೂರಿನ ಯೇನೆಪೋಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.