ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧರ್ಮ, ದೇಶ ಉಳಿಸಲು ಬಿಜೆಪಿಗೆ ಮತ ನೀಡಿ

ಬಿಜೆಪಿ ಯುವ ಸಮಾವೇಶದಲ್ಲಿ ಮೈಸೂರು –ಕೊಡಗು ಸಂಸದ ಪ್ರತಾಪ್‌ ಸಿಂಹ ಹೇಳಿಕೆ
Published 17 ಏಪ್ರಿಲ್ 2024, 7:43 IST
Last Updated 17 ಏಪ್ರಿಲ್ 2024, 7:43 IST
ಅಕ್ಷರ ಗಾತ್ರ

ದಾವಣಗೆರೆ: ‘ಧರ್ಮ ಮತ್ತು ದೇಶದ ಉಳಿವಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು 3ನೇ ಬಾರಿ ಪ್ರಧಾನಿಯಾಗುವುದು ಅತ್ಯವಶ್ಯ. ಯುವಕರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೋದಿಗೆ ಬಲ ನೀಡಬೇಕು’ ಎಂದು ಮೈಸೂರು –ಕೊಡಗು ಸಂಸದ ಪ್ರತಾಪ್ ಸಿಂಹ ಅಭಿಪ್ರಾಯಪಟ್ಟರು.

ನಗರದ ರೇಣುಕ ಮಂದಿರದಲ್ಲಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಘಟಕವು ಮಂಗಳವಾರ ಆಯೋಜಿಸಿದ್ದ ಯುವ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿ, ‘ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗದಿದ್ದರೆ ದೇಶ ಹಾಗೂ ಪಕ್ಷಕ್ಕೆ ದೊಡ್ಡ  ಅನ್ಯಾಯವಾಗಲಿದೆ’ ಎಂದು ಹೇಳಿದರು.

‘ಸಿದ್ದರಾಮಯ್ಯ ಅವರು ಅನ್ನಭಾಗ್ಯ ಜಾರಿಗೆ ತಂದಿದ್ದೇವೆ ಎಂದು ತಮಟೆ ಹೊಡೆಯುತ್ತಿದ್ದಾರೆ. ಆದರೆ, ವಾಜಪೇಯಿ ನೇತೃತ್ವದ ಸರ್ಕಾರ ಬಹಳ ಹಿಂದೆಯೇ ಅಂತ್ಯೋದಯ ಅನ್ನ ಯೋಜನೆ ಜಾರಿಗೆ ತಂದಿತ್ತು. 10 ವರ್ಷಗಳ ಕಾಂಗ್ರೆಸ್‌ ಆಡಳಿತದ ವೇಳೆ ದೇಶದ ಹಲವು ಕಡೆಗಳಲ್ಲಿ ಬಾಂಬ್‌ ಸ್ಫೋಟಗಳು ನಡೆದವು. ದೇಶ ಕತ್ತಲಲ್ಲಿ ಮುಳುಗಿತ್ತು’ ಎಂದರು.

‘2004 ರಲ್ಲಿ ಕಾರ್ಯಕರ್ತರ ಅತಿಯಾದ ವಿಶ್ವಾಸ ಹಾಗೂ ಉದಾಸೀನತೆಯಿಂದಾಗಿ ಬಿಜೆಪಿ ಸೋಲು ಅನುಭವಿಸಬೇಕಾಯಿತು. ಆ ತಪ್ಪನ್ನು ಕಾರ್ಯಕರ್ತರು ಮತ್ತೆ ಮುಂದುವರಿಸಬೇಡಿ. ಮೋದಿ ಪ್ರಧಾನಿ ಆದ ಬಳಿಕ ದೇಶ ಸಾಕಷ್ಟು ಅಭಿವೃದ್ಧಿ ಕಂಡಿದೆ. ಪಡಿತರ ತೆಗೆದುಕೊಂಡಷ್ಟೇ ಪಾಸ್ ಪೋರ್ಟ್ ಪಡೆಯಬಹುದಾಗಿದೆ. ರಾಜ್ಯದೆಲ್ಲೆಡೆ 25 ಪಾಸ್ ಪೋರ್ಟ್ ಸೇವಾ ಕೇಂದ್ರಗಳನ್ನು ಆರಂಭಿಸಲಾಗಿದೆ’ ಎಂದು ಹೇಳಿದರು.

‘ಕಾಂಗ್ರೆಸ್‌ನವರು ಕಾರ್ಯಕರ್ತರಿಗೆ ಧಮ್ಕಿ ಹಾಕುತ್ತಾರೆ. ಆದರೆ, ಸಂಸದ ಸಿದ್ದೇಶ್ವರ ಅವರು ಸರಳತೆಗೆ ಹೆಸರಾಗಿದ್ದು, ಯಾರ ಮೇಲೂ ಧಮ್ಕಿ ಹಾಕುವುದಿಲ್ಲ’ ಎಂದರು.

‘ಸ್ವಾತಂತ್ರ್ಯ ನಂತರದಲ್ಲಿ ಒಂದು ದಿನವೂ ರಜೆ ತೆಗೆದುಕೊಳ್ಳದೆ, ದಿನಕ್ಕೆ 18 ಗಂಟೆ ಕೆಲಸ ಮಾಡಿರುವ ಪ್ರಧಾನಿ ಯಾರಾದರೂ ಇದ್ದರೆ, ಅದು ಪ್ರಧಾನಿ ಮೋದಿ ಮಾತ್ರ’ ಎಂದು ಸಂಸದ ಜಿ.ಎಂ.ಸಿದ್ದೇಶ್ವರ ಹೇಳಿದರು.

‘ಯುವ ಮೋರ್ಚಾ ಪಕ್ಷದ ಆತ್ಮವಿದ್ದಂತೆ. ಬಿಜೆಪಿಗೆ ದೇಶ ಮೊದಲು, ಪಕ್ಷ ನಂತರ. ದೇಶವು ಅಭಿವೃದ್ಧಿ ಪಥದಲ್ಲಿ ಮುಂದುವರಿಯಲು ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಜಶೇಖರ ನಾಗಪ್ಪ ತಿಳಿಸಿದರು.

‘ಈಚೆಗೆ ಬಿಜೆಪಿಯಿಂದ ಕಾಂಗ್ರೆಸ್‌ಗೆ ಸೇರ್ಪಡೆಯಾದ ಪಾಲಿಕೆ ಸದಸ್ಯ ಶಾಂತಕುಮಾರ್‌ ಅವರು ದಾವಣಗೆರೆ ಗಂಡು ಎಂದರೆ ಎಸ್.ಎಸ್. ಮಲ್ಲಿಕಾರ್ಜುನ್ ಅಂತ ಹೇಳಿದ್ದಾರೆ. ಹಾಗಾದರೆ, ಶಾಂತಕುಮಾರ್ ಏನು?. ಅವರು ಗಂಡಸರಲ್ಲವೇ’ ಎಂದು ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್ ಪ್ರಶ್ನಿಸಿದರು.

ಬಿಜೆಪಿ ಎಸ್‌ಟಿ ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ, ಪಾಲಿಕೆ ಸದಸ್ಯ ಎಸ್.ಟಿ.ವೀರೇಶ್, ಯುವ ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷ ಜಿ.ಎಸ್. ಶ್ಯಾಮ್, ಜಿ.ಎಸ್‌.ಅನಿತ್‌ಕುಮಾರ್‌, ರಾಜೀವ್, ಪಾಲಿಕೆ ವಿಪಕ್ಷ ನಾಯಕ ಪ್ರಸನ್ನಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Quote - ಶಾಸಕ ಶಾಮನೂರು ಶಿವಶಂಕರಪ್ಪ ಅವರು ಮೋದಿಯವರ ಅಭಿಮಾನಿ. ಬಿಜೆಪಿಯ ಬಿ.ವೈ.ರಾಘವೇಂದ್ರ ಅವರನ್ನು ಗೆಲ್ಲಿಸಿ ಎನ್ನುವ ಮೂಲಕ ಪರೋಕ್ಷವಾಗಿ ದಾವಣಗೆರೆಯಲ್ಲೂ ಗಾಯತ್ರಿ ಸಿದ್ದೇಶ್ವರ ಅವರನ್ನು ಗೆಲ್ಲಿಸುವಂತೆ ಅವರು ಹೇಳಿದ್ದಾರೆ ಪ್ರತಾಪ್‌ ಸಿಂಹ ಸಂಸದ

Cut-off box - ‘ಬಿಜೆಪಿಗೆ ಉತ್ತಮ ವಾತಾವರಣ’ ‘ಮೈಸೂರು ಮತ್ತು ಮಂಗಳೂರಿಗೆ ಪ್ರಧಾನಿ ಮೋದಿ ಬಂದು ಹೋದ ಬಳಿಕ ರಾಜ್ಯದಲ್ಲಿ ಬಿಜೆಪಿಗೆ ಉತ್ತಮ ವಾತಾವರಣ ಸೃಷ್ಟಿಯಾಗಿದೆ. ಕಳೆದ ಬಾರಿ 26 ಕ್ಷೇತ್ರಗಳಲ್ಲಿ ಗೆದ್ದಿದ್ದೆವು. ಈ ಬಾರಿ 28 ಕ್ಷೇತ್ರ ಗೆದ್ದರೂ ಅಚ್ಚರಿ ಇಲ್ಲ’ ಎಂದು ಪ್ರತಾಹ್‌ ಸಿಂಹ ಹೇಳಿದರು. ಮಾಧ್ಯಮವರೊಂದಿಗೆ ಮಾತನಾಡಿದ ಅವರು ‘ರಾಜ್ಯದಲ್ಲಿ ಎಲ್ಲ ಅಭ್ಯರ್ಥಿಗಳೂ ಮೋದಿ ಚಿತ್ರ ಇಟ್ಟುಕೊಂಡೇ ಚುನಾವಣೆ ಮಾಡುತ್ತಿದ್ದಾರೆ. ದೇಶಕ್ಕೆ ಒಳ್ಳೆಯ ಪ್ರಧಾನಿ ಬೇಕು ಅನ್ನೋ ನಿಟ್ಟಿನಲ್ಲಿ ಜನ ಮತ ಹಾಕುತ್ತಾರೆ’ ಎಂದರು.  ‘ಸಿದ್ದರಾಮಯ್ಯ ಅವರು ಕಾಂಗ್ರೆಸ್ ಸೇರುವ ಮುನ್ನ ಸೋನಿಯಾ ಗಾಂಧಿ ವಿರುದ್ಧ ಏಕವಚನದಲ್ಲೇ ಮಾತನಾಡುತ್ತಿದ್ದರು. ಅವರಿಗೆ ಯಾರಿಗೂ ಗೌರವ ಕೊಟ್ಟು ಅಭ್ಯಾಸ ಇಲ್ಲ’ ಎಂದರು.

‘ಕಾಂಗ್ರೆಸ್‌ಗೆ ಮತ ನೀಡಿದರೆ ಸೈನಿಕರನ್ನು ಕೊಂದಂತೆ’ ‘

ಲೋಕಸಭಾ ಚುನಾವಣೆಯಲ್ಲಿ ಯುವಕರು ಕಾಂಗ್ರೆಸ್‌ ಅಭ್ಯರ್ಥಿಗೆ ಒಂದು ಮತ ಹಾಕಿದರೆ ಒಬ್ಬ ಸೈನಿಕನನ್ನು ಕೊಲೆ ಮಾಡಿದಂತೆ’ ಎಂದು ಪಾಲಿಕೆ ಸದಸ್ಯರೂ ಆದ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಆರ್‌.ಎಲ್‌.ಶಿವಪ್ರಕಾಶ್‌ ಹೇಳಿದರು. ‘ನರೇಂದ್ರ ಮೋದಿ ಅವರು ಪ್ರಧಾನಿಯಾಗುವ ಮುನ್ನ ಜಮ್ಮು ಕಾಶ್ಮೀರದಲ್ಲಿ ಯೋಧರ ಮೇಲೆ ದೌರ್ಜನ್ಯ ನಡೆಯುತ್ತಿತ್ತು. ಅವರ ಮೇಲೆ ಕಲ್ಲು ಎಸೆಯಲಾಗುತ್ತಿತ್ತು. ಗಂಡಸಾದವರು ಈಗ ಕಲ್ಲು ಎಸೆಯಲಿ. ಅವರನ್ನು ಯೋಧರು ಅಲ್ಲೇ ಶೂಟ್ ಮಾಡಿ ಸಾಯಿಸುತ್ತಾರೆ. ಈ ತಾಕತ್ತು ಬರಲು ಮೋದಿ ಕಾರಣ’ ಎಂದು ಮಂಗಳವಾರ ನಡೆದ ಬಿಜೆಪಿ ಯುವ ಮೋರ್ಚಾ ಸಮಾವೇಶದಲ್ಲಿ ತಿಳಿಸಿದರು. ‘ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಪಾಕಿಸ್ತಾನಕ್ಕೆ ಜಿಂದಾಬಾದ್ ಕೂಗುವುದು ಬಾಂಬ್ ಬ್ಲಾಸ್ಟ್ ಮಾಡುವುದೇ ಇವರ ಸಾಧನೆ’ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT