ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಸೋಂಕಿತರಿಗೂ ಮತದಾನಕ್ಕೆ ಅವಕಾಶ: ಜಿಲ್ಲಾಧಿಕಾರಿ

Last Updated 3 ಡಿಸೆಂಬರ್ 2020, 13:44 IST
ಅಕ್ಷರ ಗಾತ್ರ

ದಾವಣಗೆರೆ: ಗ್ರಾಮ ಪಂಚಾಯಿತಿಗೆ ಮತದಾನ ನಡೆಯುವ ಕಾಲದಲ್ಲಿ ಕೊರೊನಾ ಸೋಂಕಿತರು ಇದ್ದರೆ, ಅವರಿಗೂ ಮತದಾನಕ್ಕೆ ಅವಕಾಶ ನೀಡಲಾಗುವುದು. ಮತದಾನದ ಕೊನೆೆಯ ಒಂದು ಗಂಟೆ ಅವರಿಗೆ ಮೀಸಲಿಡಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು 191 ಗ್ರಾಮ ಪಂಚಾಯಿತಿಗಳ 2,628 ವಾರ್ಡ್‌ಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ನ್ಯಾಮತಿ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸಿ ಅಧಿಸೂಚನೆ ಹೊರಡಿಸಿರುವುದರಿಂದ ಈ ಗ್ರಾಮ ಪಂಚಾಯಿತಿಯನ್ನು ಚುನಾವಣೆಯಿಂದ ಕೈಬಿಡಲಾಗಿದೆ.

ಮೊದಲ ಹಂತದಲ್ಲಿ ದಾವಣಗೆರೆ, ಹೊನ್ನಾಳಿ, ಜಗಳೂರು ತಾಲ್ಲೂಕಿನ 89 ಗ್ರಾಮ ಪಂಚಾಯಿತಿಗಳಿಗೆ ಡಿ.22ರಂದು ಚುನಾವಣೆ ನಡೆಯಲಿದೆ. ಎರಡನೇ ಹಂತವಾಗಿ ಹರಿಹರ, ನ್ಯಾಮತಿ, ಚನ್ನಗಿರಿ ತಾಲ್ಲೂಕಿನ 102 ಗ್ರಾಮ ಪಂಚಾಯಿತಿಗಳಿಗೆ ಡಿ.27ರಂದು ಮತದಾನ ನಡೆಯಲಿದೆ. ಡಿ.30ಕ್ಕೆ ಎಣಿಕೆ ಕಾರ್ಯ ನಡೆಯಲಿದೆ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.

ಕೋವಿಡ್ ಮುಂಜಾಗ್ರತಾ ಕ್ರಮವಾಗಿ ಚುನಾವಣಾ ಕಾರ್ಯದಲ್ಲಿ ಭಾಗವಹಿಸುವವರು ಪ್ರಚಾರದ ಸಂದರ್ಭದಲ್ಲಿ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಕಡ್ಡಾಯವಾಗಿ ಫೇಸ್ ಮಾಸ್ಕ್ ಧರಿಸಬೇಕು. ಕೋವಿಡ್ ಪಾಸಿಟಿವ್ ಇರುವ ಅಭ್ಯರ್ಥಿಗಳು ಖುದ್ದಾಗಿ ಸಾಮಾನ್ಯ ಜನರೊಂದಿಗೆ , ಸಮುದಾಯದಲ್ಲಿ ಪ್ರಚಾರ ಮಾಡಲು ಅವಕಾಶವಿಲ್ಲ. ಯಾರೂ ಕೂಡ ಗುಂಪು ಗುಂಪಾಗಿ ಪ್ರಚಾರ ಮಾಡುವಂತಿಲ್ಲ ಎಂದರು.

ಜಿಲ್ಲೆಯ ಯಾವುದೇ ಗ್ರಾಮ ಪಂಚಾಯಿತಿಯಲ್ಲಿ ಮತದಾನ ಬಹಿಷ್ಕಾರಕ್ಕೆ ಅವಕಾಶ ನೀಡುವುದಿಲ್ಲ. ಯಾರಾದರೂ ಬಹಿಷ್ಕರಿಸಲು ನಿರ್ಧರಿಸಿದರೂ ಅವರನ್ನು ಮನವೊಲಿಸುತ್ತೇವೆ’ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಎಡಿಸಿ ಪೂಜಾರ ವೀರಮಲ್ಲಪ್ಪ, ಉಪ ವಿಭಾಗಾಧಿಕಾರಿ ಮಮತಾ ಹೊಸಗೌಡರ್, ಎಸ್‌ಎಲ್‌ಇಒ ರೇಷ್ಮಾ ಹಾನಗಲ್, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಚುನಾವಣಾ ತಹಶೀಲ್ದಾರ್‌ ಪ್ರಸಾದ್‌ ಅವರೂ ಇದ್ದರು.

136 ಸೂಕ್ಷ್ಮ, 191 ಅತಿಸೂಕ್ಮ ಮತಗಟ್ಟೆ: ಎಸ್‌ಪಿ

ಜಿಲ್ಲೆಯಲ್ಲಿ 191 ಸೂಕ್ಷ್ಮ ಹಾಗೂ 136 ಅತಿಸೂಕ್ಷ್ಮ ಮತಗಟ್ಟೆಗಳಿವೆ. ಸೂಕ್ತ ಬಂದೋಬಸ್ತ್ ಮಾಡಲಾಗುತ್ತದೆ. ಹೋಮ್‌ಗಾರ್ಡ್‌ಗಳನ್ನು ಬಳಸಿಕೊಳ್ಳಲಾಗುತ್ತಿದ್ದು ಪೆಟ್ರೋಲಿಂಗ್ ಟೀಮ್ ಇರುತ್ತದೆ. ಡಿವೈಎಸ್‌ಪಿ ಮತ್ತು ಇನ್‌ಸ್ಪೆಕ್ಟರ್‌ ಹೀಗೆ ಎರಡು ಹಂತಗಳಲ್ಲಿ ಮೇಲ್ವಿಚಾರಣೆ ಮಾಡಲಾಗುತ್ತದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಲಾಗುವುದು. ಡಿಎಆರ್ ಮತ್ತು ಕೆಎಸ್‌ಆರ್‌ಪಿ ತುಕಡಿಗಳನ್ನು ಬಳಸಿಕೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ಮಾಹಿತಿ ನೀಡಿದರು.

ಹಿಂದಿನ ಗ್ರಾಮ ಪಂಚಾಯಿತಿ ಚುನಾವಣೆಯ ಸಂದರ್ಭದಲ್ಲಿ 9 ಕ್ರಿಮಿನಲ್‌ ಪ್ರಕರಣಗಳು ದಾಖಲಾಗಿದ್ದವು. ಈ ಬಾರಿ ಕ್ರಿಮಿನಲ್‌ ಪ್ರಕರಣಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗುವುದು. ಗಲಭೆಗಳು ನಡೆಯುವ ಗ್ರಾಮಗಳನ್ನು ಗುರುತಿಸಲಾಗಿದೆ. ಅಲ್ಲಿ ಹೆಚ್ಚು ನಿಗಾ ಇಡಲಾಗುವುದು. ಗಲಭೆ ಮಾಡುವವರನ್ನು ಪಟ್ಟಿ ಮಾಡಲಾಗುವುದು ಎಂದು ತಿಳಿಸಿದರು.

ಮೊದಲ ಹಂತದ ಮೀಸಲಾತಿ ವಿವರ

ಸ್ಥಾನಗಳು ಸಾಮಾನ್ಯ ಮಹಿಳೆ ಒಟ್ಟು

ಎಸ್‌ಸಿ 142 192 334

ಎಸ್‌ಟಿ 85 144 229

ಬಿಸಿ (ಎ) 34 66 100

ಬಿಸಿ (ಬಿ) 12 4 16

ಸಾಮಾನ್ಯ 366 274 640

ಒಟ್ಟು 639 680 1319


ಎರಡನೇ ಹಂತದ ಮೀಸಲಾತಿ ವಿವರ

ಸ್ಥಾನಗಳು ಸಾಮಾನ್ಯ ಮಹಿಳೆ ಒಟ್ಟು

ಎಸ್‌ಸಿ 124 171 295

ಎಸ್‌ಟಿ 46 122 168

ಬಿಸಿ (ಎ) 60 108 168

ಬಿಸಿ (ಬಿ) 22 11 33

ಸಾಮಾನ್ಯ 378 267 645

ಒಟ್ಟು 630 679 1309

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT