ಬುಧವಾರ, ಜೂನ್ 23, 2021
22 °C

ಪಾಲಿಕೆಯಿಂದ ಜಿಲ್ಲಾ ಆಸ್ಪತ್ರೆಗೆ ವಾಟರ್ ಡಿಸ್ಪೆನ್ಸರ್ ಕೊಡುಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಇಲ್ಲಿನ ಮಹಾನಗರ ಪಾಲಿಕೆಯಿಂದ ಕೋವಿಡ್ ರೋಗಿಗಳ ಅನುಕೂಲಕ್ಕಾಗಿ ಒಟ್ಟು 22 ಬ್ಲೂಸ್ಟಾರ್ ಬಿಸಿ ಮತ್ತು ತಂ‍ಪು ನೀರು ವಿತರಕ ಯಂತ್ರಗಳನ್ನು ಜಿಲ್ಲಾ ಆಸ್ಪತ್ರೆಗೆ ನೀಡಲಾಯಿತು.

ಸಂಸದ ಜಿ.ಎಂ.ಸಿದ್ದೇಶ್ವರ, ಮೇಯರ್‌ ಎಸ್‌.ಟಿ. ವೀರೇಶ್‌ ಅವರು ಜಿಲ್ಲಾ ಆಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರಿಗೆ ಹಸ್ತಾಂತರಿಸಿದರು.

ಜಿಲ್ಲೆಯಲ್ಲಿ ಆಮ್ಲಜನಕ ಕೊರತೆ ಇರುವುದರಿಂದ ಆಮ್ಲಜನಕ ಕಾನ್ಸನ್‍ಟ್ರೇಟರ್ ಖರೀದಿಸಲು ಪಾಲಿಕೆಯಿಂದ ₹ 50 ಲಕ್ಷ ಪಡೆಯಲಾಗಿದೆ. ದಾನಿಗಳು ಸಹಾಯಹಸ್ತ ನೀಡಲು ಮುಂದೆ ಬಂದರೆ ಮತ್ತಷ್ಟು ಆಮ್ಲಜನಕ ಕಾನ್ಸನ್‍ಟ್ರೇಟರ್‌ಗಳನ್ನು ಖರೀದಿಸಲಾಗುವುದು ಎಂದು ಸಂಸದರು ತಿಳಿಸಿದರು.

ಆಸ್ಪತ್ರೆಯ ವೈದ್ಯರು, ಸಿಬ್ಬಂದಿಯ ಸಲಹೆ ಮೇರೆಗೆ ಹಾಗೂ ರೋಗಿಗಳಿಗೆ ಅನುಕೂಲಕ್ಕಾಗಿ ತಲಾ ₹ 9 ಸಾವಿರ ಮೌಲ್ಯದ  22 ನೀರಿನ ವಿತರಕ ಯಂತ್ರ ನೀಡಲಾಗಿದೆ ಎಂದು ಮೇಯರ್‌ ತಿಳಿಸಿದರು.

ಕೋವಿಡ್ ನೋಡಲ್ ಅಧಿಕಾರಿ ಪ್ರಮೋದ ನಾಯಕ್, ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ಜಿಲ್ಲಾ ಆಸ್ಪತ್ರೆ ಸರ್ಜನ್‌ ಡಾ.ಜಯಪ್ರಕಾಶ್ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು