ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು

Published 23 ಮೇ 2024, 4:52 IST
Last Updated 23 ಮೇ 2024, 4:52 IST
ಅಕ್ಷರ ಗಾತ್ರ

ಶಿವಮೊಗ್ಗ: ಗದಗ, ಹಾವೇರಿ ಜಿಲ್ಲೆಗಳ ವ್ಯಾಪ್ತಿಗೆ ಬರುವ ಗ್ರಾಮಗಳ ಕುಡಿಯುವ ನೀರಿಗಾಗಿ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಮೇ 22ರ ರಾತ್ರಿ 10ರಿಂದ 28ರವರೆಗೆ ನೀರು ಹರಿಸಲಾಗುತ್ತಿದೆ.

ಪ್ರತಿ ದಿನ 2,000 ಕ್ಯುಸೆಕ್‌ನಂತೆ ಒಟ್ಟು 11,574 ಕ್ಯುಸೆಕ್ ನೀರು ಹರಿಸಲಾಗುವುದು ಎಂದು ಕರ್ನಾಟಕ ನೀರಾವರಿ ನಿಗಮದ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಅವಧಿಯಲ್ಲಿ ಸಾರ್ವಜನಿಕರು ನದಿ ಪಾತ್ರದಲ್ಲಿ ತಿರುಗಾಡುವುದು, ದನಕರುಗಳ ನದಿಗೆ ಇಳಿಸುವುದು ಇತ್ಯಾದಿ ಚಟುವಟಿಕೆಗಳನ್ನು ಮಾಡದಂತೆ ಎಚ್ಚರಿಕೆ ನೀಡಿದೆ. ರೈತರು ನದಿ ದಂಡೆಯಲ್ಲಿ ಅನಧಿಕೃತವಾಗಿ ಅಳವಡಿಸಿರುವ ಪಂಪ್‍ಸೆಟ್‍ಗಳಿಂದ ನೀರೆತ್ತುವುದನ್ನೂ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸುವಂತೆ ಪ್ರಕಟಣೆ ಕೋರಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT