ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನಗಿರಿ: ಸರ್ಕಾರಿ ಕಚೇರಿ ತಾರಸಿಯಲ್ಲಿ ಪಕ್ಷಿ ಸಂಕುಲಕ್ಕೆ ನೀರು

Published 8 ಏಪ್ರಿಲ್ 2024, 5:57 IST
Last Updated 8 ಏಪ್ರಿಲ್ 2024, 5:57 IST
ಅಕ್ಷರ ಗಾತ್ರ

ಚನ್ನಗಿರಿ: ತಾಲ್ಲೂಕಿನಾದ್ಯಂತ ದಿನೇ ದಿನೇ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ನೀರಿಗಾಗಿ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೆರೆಕಟ್ಟೆ, ಹೊಂಡ, ಬಾವಿಗಳು ನೀರಿಲ್ಲದೇ ಸಂಪೂರ್ಣ ಒಣಗಿವೆ. ಪರಿಣಾಮವಾಗಿ ಪಕ್ಷಿ ಸಂಕುಲ ಅಪಾಯಕ್ಕೆ ಸಿಲುಕಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಸರ್ಕಾರಿ ಕಚೇರಿಗಳ ತಾರಸಿ ಮೇಲೆ ಪಕ್ಷಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದು, ತಾಲ್ಲೂಕಿನ ಎಲ್ಲ ಸರ್ಕಾರಿ ಕಚೇರಿಗಳ ತಾರಸಿ ಮೇಲೆ ಭಾನುವಾರದಿಂದಲೇ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ.

ಪಟ್ಟಣದ ತಹಶೀಲ್ದಾರ್ ಕಚೇರಿ ಸೇರಿ ಎಲ್ಲ ಕಚೇರಿಗಳು, ತಾಲ್ಲೂಕಿನ ವಿದ್ಯಾರ್ಥಿನಿಲಯಗಳು, ಬೆಸ್ಕಾಂ ಮತ್ತು ಕೆಲ ಸಾರ್ವಜನಿಕರು ಕೂಡಾ ತಮ್ಮ ಮನೆಗಳ ತಾರಸಿ ಮೇಲೆ ಪಕ್ಷಿ ಸಂಕುಲಕ್ಕೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ.

ತಾಲ್ಲೂಕಿನಲ್ಲಿ ಎರಡು ದಿನಗಳಿಂದ ಬಿಸಿಲಿನ ತಾಪ 39ರಿಂದ 40 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗಿದೆ. ಜನರು ಬಿಸಿಲಿನ ತಾಪಕ್ಕೆ ಹೆದರಿ ಮಧ್ಯಾಹ್ನದ ಹೊತ್ತಿನಲ್ಲಿ ಮನೆಗಳನ್ನು ಬಿಟ್ಟು ಹೊರಗಡೆ ಬರುತ್ತಿಲ್ಲ. ಪಕ್ಷಿಗಳು ಕೂಡಾ ತಮ್ಮ ಗೂಡಿನಲ್ಲಿ ವಿರಮಿಸುತ್ತಿವೆ. ಇತ್ತ ಜನರು ನೀರಿನ ದಾಹ ಇಂಗಿಸಿಕೊಳ್ಳಲು ತಂಪು ಪಾನೀಯ, ಎಳನೀರು, ಕಲ್ಲಂಗಡಿ ಹಣ್ಣುಗಳಿಗೆ ಮೊರೆ ಹೋಗಿದ್ದಾರೆ. ಎಳನೀರು ಹಾಗೂ ತಂಪು ಪಾನೀಯಗಳಿಗೆ ಇನ್ನಿಲ್ಲದ ಬೇಡಿಕೆ ಹೆಚ್ಚಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT