ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಲಸಿಕೆ ಸಂಗ್ರಹಣೆಗೆ ಸಂಪೂರ್ಣ ಸಿದ್ಧ: ಡಿಸಿ

Last Updated 3 ಡಿಸೆಂಬರ್ 2020, 14:07 IST
ಅಕ್ಷರ ಗಾತ್ರ

ದಾವಣಗೆರೆ: ಕೋವಿಡ್-19 ಸೋಂಕು ತಡೆಗಟ್ಟಲು ಲಸಿಕೆ ಲಭ್ಯವಾದಲ್ಲಿ ಜಿಲ್ಲೆಯಲ್ಲಿ ಅದಕ್ಕೆ ಬೇಕಾಗಿರುವ ಎಲ್ಲಾ ತಯಾರಿ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಸರ್ಕಾರಕ್ಕೂ ಮಾಹಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

ವೈದ್ಯರು, ನರ್ಸ್‌ಗಳು, ಸಿಬ್ಬಂದಿ ಸೇರಿ ಆರೋಗ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಆರಂಭಿಕ ಹಂತದಲ್ಲಿ ಲಸಿಕೆ ನೀಡಲು ಪಟ್ಟಿ ಮಾಡಲಾಗಿದೆ. ಆರೋಗ್ಯ ಕ್ಷೇತ್ರದಲ್ಲಿ ಸರ್ಕಾರಿ ವ್ಯವಸ್ಥೆಯಲ್ಲಿ ಕೆಲಸ ಮಾಡುವ 6,230 ಮತ್ತು ಖಾಸಗಿ ವ್ಯವಸ್ಥೆಯಲ್ಲಿ ಕೆಲಸ ಮಾಡುವ 3,885 ಮಂದಿ ಸೇರಿ ಒಟ್ಟು 10,115 ಮಂದಿ ಲಸಿಕೆ ಪಡೆಯಲಿದ್ದಾರೆ ಎಂದು ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.

‘ಲಸಿಕೆ ನೀಡಲು ವಿಶೇಷ ತಜ್ಞತೆ, ಕೌಶಲ ಬೇಕಾಗುತ್ತದೆ. ಅದಕ್ಕಾಗಿ 983 ಸರ್ಕಾರಿ ಸಿಬ್ಬಂದಿ, 1,889 ಖಾಸಗಿ ಸಿಬ್ಬಂದಿ ತಯಾರಾಗಿದ್ದಾರೆ. ಜಿಲ್ಲೆಗೆ ಪೂರೈಕೆ ಆಗುವ ಲಸಿಕೆ ದಾಸ್ತಾನು ಮಾಡಲು 109 ಐಸ್‌ಲೈನ್‌ ರೆಫ್ರಿಜರ್‌ (ಐಎಲ್‌ಆರ್‌), ಪಶು ಸಂಗೋಪನಾ ಇಲಾಖೆಯ 9 ಐಎಲ್‌ಆರ್‌, ದಾವಣಗೆರೆ ಮತ್ತು ಚನ್ನಗಿರಿಯಲ್ಲಿ ಒಟ್ಟು ಎರಡು ವಾಕಿಂಗ್‌ ಕ್ಯಾರಿಯರ್‌ ವ್ಯವಸ್ಥೆ ಸಿದ್ಧವಿದೆ. 1 ಲಕ್ಷದ 52 ಲಸಿಕೆ ಸಂಗ್ರಹಿಸಿ ಇಟ್ಟುಕೊಳ್ಳುವ ಸಾಮರ್ಥ್ಯ ನಮ್ಮಲ್ಲಿದೆ’ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT