ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪಚುನಾವಣೆ | ಬಿಜೆಪಿ 15 ಕ್ಷೇತ್ರಗಳಲ್ಲೂ ಗೆಲುವು ಪಡೆಯಲಿದೆ: ರೇಣುಕಾಚಾರ್ಯ

Last Updated 21 ಸೆಪ್ಟೆಂಬರ್ 2019, 14:18 IST
ಅಕ್ಷರ ಗಾತ್ರ

ದಾವಣಗೆರೆ: ಈ ಬಾರಿಯ ಉಪ ಚುನಾವಣೆಯಲ್ಲಿ ಬಿಜೆಪಿ 15 ಕ್ಷೇತ್ರಗಳಲ್ಲೂ ಗೆಲುವು ಪಡೆಯಲಿದ್ದು, ಸುಭದ್ರ ಸರ್ಕಾರಕ್ಕೆ ಜನರು ಆಶೀರ್ವಾದ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ‘ಪಕ್ಷ ಸಂಘಟನೆ, ಚುನಾವಣೆಗೆ ಬಿಜೆಪಿಗೆ ಹೊಸದಲ್ಲ. ಸಂಘಟನೆ ನಿರಂತರವಾಗಿದ್ದು, ಮುಖ್ಯಮಂತ್ರಿ ಹಾಗೂ ಬಿಜಪಿ ರಾಜ್ಯ ಘಟಕದ ಅಧ್ಯಕ್ಷರು ಚರ್ಚಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಾರೆ’ ಎಂದು ಹೇಳಿದರು.

‘ಮಾಜಿ ಸ್ಪೀಕರ್ ರಮೇಶ್‌ ಕುಮಾರ್ ಅವರು ಶಾಸಕರ ರಾಜೀನಾಮೆ ಅಂಗೀಕರಿಸುವ ಬದಲು ಅವರನ್ನು ಅನರ್ಹಗೊಳಿಸಿ ಸರ್ವಾಧಿಕಾರಿಯಂತೆ ವರ್ತಿಸಿದ್ದಾರೆ. ರಾಜೀನಾಮೆ ಶಾಸಕರ ವೈಯಕ್ತಿಕ ವಿಚಾರ, ಸರ್ಕಾರದ ಮೇಲೆ ವಿಶ್ವಾಸ ಇಲ್ಲ ಎಂದು ರಾಜೀನಾಮೆ ನೀಡಿದ್ದರು. ಅಂಗೀಕರಿಸುವ ಬದಲು ಅನರ್ಹಗೊಳಿಸಿದ್ದು ಕರಾಳ ದಿನ’ ಎಂದು ಟೀಕಿಸಿದರು.

‘ಸುಪ್ರೀಂ ಕೋರ್ಟ್‌ ತೀರ್ಪು ಅನರ್ಹ ಶಾಸಕರ ಪರವಾಗಿ ಬರುವ ವಿಶ್ವಾಸವಿದ್ದು, ಕೋರ್ಟ್ ಯಾವಾಗ ತೀರ್ಪು ಕೊಡುತ್ತದೆ ಎಂದು ಹೇಳಲು ಆಗುವುದಿಲ್ಲ. ಕ್ಷೇತ್ರಗಳಲ್ಲಿ ಅಣ್ಯರ್ಥಿಗಳ ಪರ ಕಾರ್ಯಕರ್ತರಂತೆ ಕೆಲಸ ಮಾಡಿ ಸುಭದ್ರ ಸರ್ಕಾರಕ್ಕೆ ಆಶೀರ್ವಾದ ಮಾಡಿ ಎಂದು ಜನರಲ್ಲಿ ಮನವಿ ಮಾಡುತ್ತೇವೆ’ ಎಂದು ಹೇಳಿದರು.

ಜೆಡಿಎಸ್‌ ಅಂಗಡಿ ಬಂದ್

‘ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿ ಆಗಲು ಹಗಲುಗನಸು ಕಾಣುತ್ತಿದ್ದಾರೆ. ಅವರು ಲಾಟರಿ ಮುಖ್ಯಮಂತ್ರಿ. 2006ರಲ್ಲಿ ಯಡಿಯೂರಪ್ಪ ಬೆಂಬಲದಿಂದ ಮುಖ್ಯಮಂತ್ರಿ ಆದರು. 2018ರಲ್ಲಿ ಬಿಜೆಪಿಯನ್ನು ಹೊರಗಿಡುವ ಕಾರಣಕ್ಕೆ ಕಾಂಗ್ರೆಸ್‌ ಹಾಗೂ ಜೆಡಿಎಸ್ ಪಕ್ಷಗಳು ಹೊಂದಾಣಿಕೆ ಮಾಡಿಕೊಂಡು ಸರ್ಕಾರ ರಚನೆ ಮಾಡಿದವು. ಕುಮಾರಸ್ವಾಮಿ ಯಾವಾಗಲು ಲಾಟರಿ ಮೂಲಕ ನಡೆಯುತ್ತದೆ ಅಂದುಕೊಂಡಿದ್ದಾರೆ. ಆದರೆ ಈ ಸಲ ಅದು ನಡೆಯುವುದಿಲ್ಲ. ದೇವೇಗೌಡರ ಕುಟುಂಬ ರಾಜಕಾರಣ ಈಗ ಮುಗಿಯುತ್ತದೆ. ಅವರ ಅಂಗಡಿಗಳು ಬಂದ್ ಆಗುತ್ತವೆ’ ಎಂದು ಟೀಕಿಸಿದರು.

ಯಡಿಯೂರಪ್ಪ ಅವರ ಪತ್ನಿಯ ಸಾವಿನ ಕುರಿತು ಎಚ್‌.ಡಿ. ಕುಮಾರಸ್ವಾಮಿ ಅವರು ಅನುಮಾನ ವ್ಯಕ್ತಪಡಿಸಿರುವುದಕ್ಕೆ ಪ್ರತಿಕ್ರಿಯಿಸಿದ ಅವರು ‘ಯಾರು ವೈಯಕ್ತಿಕ ಬದುಕಿನ ಬಗ್ಗೆ ಮಾತನಾಡಬಾರದು. ಹಾಗೆ ಮಾಡಿದರೆ ಅದು ಮೂರ್ಖತನ. ‘ಅವರು ಏನು ಮಾಡಿದ್ದಾರೋ ಅದು ರಾಜ್ಯದ ಜನರಿಗೆ ಗೊತ್ತಿದೆ’ ಎಂದು ವ್ಯಂಗ್ಯವಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT