ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸರ್ಕಾರಿ ನೌಕರರ ಜೊತೆ ನಾವಿದ್ದೇವೆ’

ಧ್ವನಿ ಸುರುಳಿ ಬಿಡುಗಡೆ * ಕೋವಿಡ್‌ಗೆ ಶ್ರಮಿಸಿದ ಸರ್ಕಾರಿ ನೌಕರರಿಗೆ ಅಭಿನಂದನೆ
Last Updated 3 ಜೂನ್ 2020, 16:43 IST
ಅಕ್ಷರ ಗಾತ್ರ

ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶ್ರೀಹರ ಮ್ಯೂಸಿಕಲ್ ವರ್ಲ್ಡ್‌, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಂಯುಕ್ತಾಶ್ರಯಲ್ಲಿ ಜಿಲ್ಲಾಡಳಿತ ಭವನದ ತುಂಗಾಭದ್ರಾ ಸಂಭಾಗಣದಲ್ಲಿ ಬುಧವಾರ ‘ಕೊರೊನಾ ಇದು ಸರಿನಾ’ ಧ್ವನಿ ಸುರುಳಿ ಬಿಡುಗಡೆ ಹಾಗೂ ಕೊರೊನಾ ಸೈನಿಕರಿಗೆ ಅಭಿನಂದನೆ ಸಲ್ಲಿಸಲಾಯಿತು.

ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಪೋಲಿಸ್ ಸಿಬ್ಬಂದಿ, ಆರೋಗ್ಯ ಇಲಾಖೆ, ಅಗ್ನಿಶಾಮಕ ದಳ, ಗೃಹರಕ್ಷಕದಳ ಪೌರಕಾರ್ಮಿಕರಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿ ಜಿಲ್ಲಾಡಳಿತದಿಂದ ಹೂಮಳೆ ಸುರಿಸುವ ಮೂಲಕ ಅಭಿನಂದನೆ ಸಲ್ಲಿಸಲಾಯಿತು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಎಸ್.ಷಡಾಕ್ಷರಿ ಮಾತನಾಡಿ, ‘ಕೋವಿಡ್-19 ಸಂಬಂಧ ಲಾಕ್‍ಡೌನ್ ಸಂದರ್ಭದಲ್ಲಿ ಸರ್ಕಾರಿ ನೌಕರರು ಕೋವಿಡ್ ವಿರುದ್ದ ಹೋರಾಡುತ್ತಿದ್ದಾರೆ. ಉತ್ತರ ಕರ್ನಾಟಕದ ಪ್ರವಾಹದಲ್ಲಿ ನೆರೆ ಸಂತ್ರಸ್ತರ ಪರವಾಗಿ ಹಾಗೂ ಲಾಕ್‍ಡೌನ್ ಸಮಯದಲ್ಲಿ ತಮ್ಮ ಒಂದು ದಿನದ ವೇತನ ಒಟ್ಟು ₹200 ಕೋಟಿಗಳನ್ನು ರಾಜ್ಯ ಸರ್ಕಾರಕ್ಕೆ ನೀಡಿದ್ದೇವೆ’ ಎಂದರು.

‘ಕೋವಿಡ್-19 ಸಂಬಂಧ ಯಾವ ನೌಕರರು ಭಯ ಪಡುವುದು ಬೇಡ. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಹಂತ ಹಂತವಾಗಿ ಸರ್ಕಾರಿ ನೌಕರರ ವೇತನ ಮತ್ತು ಡಿಎ ಸೇರಿ ಹಲವು ಸಮಸ್ಯೆಗಳನ್ನು ಬಗೆಹರಿಸಲಾಗುವುದು. ಸರ್ಕಾರ ನಮ್ಮೊಂದಿಗಿದೆ. ನೌಕರರು ಈ ಕುರಿತು ಯಾವುದೇ ಆತಂಕಕ್ಕೆ ಒಳಪಡುವುದು ಬೇಡ. ಜೊತೆಗೆ ಜಿಲ್ಲಾಧಿಕಾರಿ ನೌಕರರ ಪರವಾಗಿದ್ದಾರೆ’ ಎಂದರು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಕೋವಿಡ್-19 ಸಂದರ್ಭ ಸರ್ಕಾರಿ ನೌಕರರು 13 ಕಂಟೈನ್‍ಮೆಂಟ್ ವಲಯಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಕೋವಿಡ್ ಸೋಂಕಿತರು ಇನ್ನೂ ಹೆಚ್ಚಾದರೂ ಸರ್ಕಾರಿ ನೌಕರರು ಎಂದೆಂದಿಗೂ ನಮ್ಮ ಜೊತೆ ಇರುತ್ತಾರೆ ಎಂಬ ಭರವಸೆ ಇದೆ’ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಮಾತನಾಡಿ, ಕೋವಿಡ್-19ನಿಂದ ಜಿಲ್ಲೆ ಇನ್ನೂ ಮುಕ್ತವಾಗಿಲ್ಲ. ಸಾರ್ವಜನಿಕರು ತುಂಬಾ ಜಾಗರೂಕತೆಯಿಂದ ಇರಬೇಕು. ಲಾಕಡೌನ್ ಸಮಯದಲ್ಲಿ ಸರ್ಕಾರಿ ನೌಕರರ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗಿದೆ. ನಾವು ನಿಮ್ಮೊಂದಿಗೆ ಇದ್ದೇವೆ’ ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷ ಬಿ. ಪಾಲಾಕ್ಷಿ, ಹೆಚ್ಚುವರಿ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ಡಿಎಚ್‍ಒ ಡಾ.ರಾಘವೇಂದ್ರ ಸ್ವಾಮಿ, ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT