ಗುರುವಾರ, 30 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರದಕ್ಷಿಣೆ ಕಿರುಕುಳ: ಮಗುವಿನೊಂದಿಗೆ ತಾಯಿ ಆತ್ಮಹತ್ಯೆ

Published 17 ಅಕ್ಟೋಬರ್ 2023, 7:06 IST
Last Updated 17 ಅಕ್ಟೋಬರ್ 2023, 7:06 IST
ಅಕ್ಷರ ಗಾತ್ರ

ಚನ್ನಗಿರಿ: ಮಹಿಳೆಯೊಬ್ಬರು ತನ್ನ ಐದು ವರ್ಷದ ಮಗುವನ್ನು ವೇಲ್‌ಗೆ ಕಟ್ಟಿಕೊಂಡು ಸೂಳೆಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ತಾಲ್ಲೂಕಿನ ಹೊನ್ನೇಬಾಗಿ ಗ್ರಾಮದ ಮಂಜುನಾಥ್ ಅವರ ಪತ್ನಿ ಕವಿತಾ (27), ಪುತ್ರಿ ನಿಹಾರಿಕಾ (5) ಮೃತಪಟ್ಟವರು.

ಆರು ವರ್ಷಗಳ ಹಿಂದ ಹೊನ್ನೇಬಾಗಿ ಗ್ರಾಮದ ಮಂಜುನಾಥ್ ಅವರೊಂದಿಗೆ ಎರೇಹಳ್ಳಿ ಗ್ರಾಮದ ಕವಿತಾ ಅವರ ವಿವಾಹವಾಗಿತ್ತು. ಕವಿತಾ ಅವರು ಮಗುವಿನೊಂದಿಗೆ ಕಾಣೆಯಾಗಿರುವ ಬಗ್ಗೆ ಚನ್ನಗಿರಿ ಠಾಣೆಗೆ ಪತಿ ಮಂಜುನಾಥ್ ದೂರು ನೀಡಿದ್ದರು. ಸಾಕಷ್ಟು ಹುಡುಕಾಟದ ಬಳಿಕ ಸೂಳೆಕೆರೆಯಲ್ಲಿ ಕವಿತಾ ಮತ್ತು ನಿಹಾರಿಕಾ ಶವಗಳು ಪತ್ತೆಯಾಗಿದ್ದವು.

ಎಸ್‌ಪಿ ಉಮಾ ಪ್ರಶಾಂತ್ ಹಾಗೂ ಡಿವೈಎಸ್‌ಪಿ ಪ್ರಶಾಂತ್ ಮನ್ನೊಳಿ ಅವರು ಭಾನುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ವರದಕ್ಷಿಣೆ ಕಿರುಕುಳದಿಂದ ತಮ್ಮ ಮಗಳು ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಂಜುನಾಥ್‌ನನ್ನು ಬಂಧಿಸಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಕವಿತಾ ತವರು ಮನೆಯವರು ದೂರಿನಲ್ಲಿ ತಿಳಿಸಿದ್ದಾರೆ. ವಿಚಾರಣೆ ನಡೆದಿದೆ ಎಂದು ಸಿಪಿಐ ಕೆ.ಬಿ. ನಿರಂಜನ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT