ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನಸಿಕ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ: ವಿಶ್ವನಾಥ ಸಲಹೆ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ
Published 18 ಅಕ್ಟೋಬರ್ 2023, 15:40 IST
Last Updated 18 ಅಕ್ಟೋಬರ್ 2023, 15:40 IST
ಅಕ್ಷರ ಗಾತ್ರ

ಚನ್ನಗಿರಿ: ಖಿನ್ನತೆಯು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುವುದಲ್ಲದೇ ದೈಹಿಕ ಆರೋಗ್ಯ ಮತ್ತು ವ್ಯಕ್ತಿಗಳ ಜೀವನೋಪಾಯದ ಮೇಲೂ ಪರಿಣಾಮ ಬೀರುತ್ತದೆ. ಮನೋರೋಗವನ್ನು ನಿರ್ಲಕ್ಷ್ಯ ಮಾಡಬಾರದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ವಿಶ್ವನಾಥ ವಿ. ಮುಗತಿ ಸಲಹೆ ನೀಡಿದರು.

ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಆರೋಗ್ಯ ಇಲಾಖೆ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವ್ಯಕ್ತಿಯ ಮಾನಸಿಕ ಯೋಗಕ್ಷೇಮದ ಪ್ರಾಮುಖ್ಯತೆ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡುವ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಅಕ್ಟೋಬರ್ ತಿಂಗಳಲ್ಲಿ ಈ ದಿನಾಚರಣೆ ಆಚರಿಸಲಾಗುತ್ತಿದೆ. ಯುವ ಪೀಳಿಗೆ ಮಾನಸಿಕ ಸಮಸ್ಯೆಯನ್ನು ಹೆಚ್ಚಾಗಿ ಎದುರಿಸುತ್ತಿರುವುದು ಆತಂಕದ ಸಂಗತಿಯಾಗಿದೆ. ಮಾನಸಿಕ ರೋಗಿಗಳನ್ನು ನಿಕೃಷ್ಟವಾಗಿ ಕಾಣುವ ಪದ್ಧತಿ ಇನ್ನೂ ನಿಂತಿಲ್ಲ. ಇದರಿಂದ ಮಾನಸಿಕ ರೋಗಿಗಳು ಇನ್ನಷ್ಟು ಕೀಳರಿಮೆ ಅನುಭವಿಸುವಂತಾಗಿದೆ. ಮಾನಸಿಕ ಸಮಸ್ಯೆಯಿಂದ ಬಳಲುವವರು ಪಾಲಕರು ಅಥವಾ ಸ್ನೇಹಿತರ ಬಳಿ ತಮ್ಮ ಸಮಸ್ಯೆ ಬಗ್ಗೆ ಹೇಳಿಕೊಳ್ಳಬೇಕು. ಕೂಡಲೇ ತಜ್ಞ ವೈದ್ಯರ ಬಳಿ ಹೋಗಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದರು.

ಜಿಲ್ಲಾ ಮಾನಸಿಕ ಆರೋಗ್ಯ ಆಪ್ತ ಸಮಾಲೋಚಕ ಸಂತೋಷ್ ಉಪನ್ಯಾಸ ನೀಡಿದರು. ವಕೀಲರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಂ. ರಾಜಪ್ಪ ಅಧ್ಯಕ್ಷತೆ ವಹಿಸಿದ್ದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಈ.ಶಿವಕುಮಾರ್, ಡಾ.ಅಶೋಕ್, ವಕೀಲರ ಸಂಘದ ತಾಲ್ಲೂಕು ಘಟಕದ ಉಪಾಧ್ಯಕ್ಷ ಆರ್.ಬಾಬುಜಾನ್, ಕಾರ್ಯದರ್ಶಿ ಎ.ಎಸ್. ಜಗದೀಶ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಟಿ.ಲೋಕೇಶಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT