ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: ವಿಶ್ವ ತಂಬಾಕು ರಹಿತ ದಿನಾಚರಣೆ, ಜಾಗೃತಿ ಜಾಥಾ

Last Updated 1 ಜೂನ್ 2022, 4:00 IST
ಅಕ್ಷರ ಗಾತ್ರ

ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಗಟೇರಿ ಜಿಲ್ಲಾ ಆಸ್ಪತ್ರೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಮಂಗಳವಾರ ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ‘ವಿಶ್ವ ತಂಬಾಕು ರಹಿತ ದಿನ– 2022’ ಜಾಗೃತಿ ಜಾಥಾ ನಡೆಯಿತು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪ್ರವೀಣ್ ನಾಯಕ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ತಂಬಾಕು ಪರಿಸರಕ್ಕೆ ಮಾರಕ ಎಂಬ ಪ್ರಸಕ್ತ ವರ್ಷದ ಘೋಷಣೆ ಹಾಗೂ ಗಿಡ ನೆಡಿ ತಂಬಾಕು ಬಿಡಿ ಎಂಬ ಬಿತ್ತಿ ಪತ್ರಗಳನ್ನು ಒಳಗೊಂಡ ಕಾಲ್ನಡಿಗೆ ಜಾಥವು ಜನರಲ್ಲಿ ಜಾಗೃತಿ ಮೂಡಿಸಲು ವಿವಿಧ ಘೋಷಣೆಗಳನ್ನು ಕೂಗಲಾಯಿತು. ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಿಂದ ಹೊರಟು ಬಾಪೂಜಿ ಆಸ್ಪತ್ರೆಯ ಮಾರ್ಗವಾಗಿ ಪುನಃ ಜಿಲ್ಲಾ ಆಸ್ಪತ್ರೆಗೆ ಜಾಥಾ ತಲುಪಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗರಾಜ, ಜಿಲ್ಲಾ ಮಲೇರಿಯ ನಿಯಂತ್ರಣಾಧಿಕಾರಿ ಡಾ.ಕೆ. ನಟರಾಜ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್, ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು, ಎನ್.ಸಿ.ಸಿ ವಿದ್ಯಾರ್ಥಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT