ಗುರುವಾರ , ಆಗಸ್ಟ್ 5, 2021
29 °C

ಯಡಿಯೂರಪ್ಪ ಅವರೇ ಇನ್ನೆರಡು ವರ್ಷ ಮುಖ್ಯಮಂತ್ರಿ: ಸಂಸದ ಜಿ.ಎಂ. ಸಿದ್ದೇಶ್ವರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ. ಪಕ್ಷ ಒಂದು ಕುಟುಂಬವಿದ್ದಂತೆ. ಸಣ್ಣಪುಟ್ಟ ಸಮಸ್ಯೆಗಳು ಇದ್ದಿದ್ದೇ. ಅವುಗಳನ್ನೆಲ್ಲ ಸರಿಪಡಿಸಿಕೊಳ್ಳುತ್ತೇವೆ. ಮುಂದಿನ ಎರಡು ವರ್ಷ ಬಿ.ಎಸ್‌. ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದ್ದಾರೆ.

ಸೋಮವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ವಿಶ್ವನಾಥ್‌ ಅವರಿಗೆ ಸಚಿವ ಸ್ಥಾನ ಸಿಗದ ಕಾರಣಕ್ಕಾಗಿ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ವಿಶ್ವನಾಥ್‌ ಅವರಲ್ಲಿ ದಾಖಲೆಗಳಿದ್ದರೆ ನೀಡಲಿ. ಎಂಎಲ್‌ಸಿ ನಾಮನಿರ್ದೇಶನ ಆದವರಿಗೆ ಸಚಿವಸ್ಥಾನ ನೀಡಲು ಬರುವುದಿಲ್ಲ. ವಿಶ್ವನಾಥ್‌ ಕೂಡ ನಮ್ಮ ನಾಯಕರೇ ಆಗಿದ್ದಾರೆ. ಮುಂದೆ ನೋಡೋಣ’ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು