ಶುಕ್ರವಾರ, ಸೆಪ್ಟೆಂಬರ್ 17, 2021
22 °C

ಯಡಿಯೂರಪ್ಪ, ಹೈಕಮಾಂಡ್ ಸೇರಿ ಸಿಎಂ ಅಭ್ಯರ್ಥಿ ನಿರ್ಧಾರ: ಸಚಿವ ಕೆ.ಎಸ್.ಈಶ್ವರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಹೈಕಮಾಂಡ್ ಸೇರಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ತೀರ್ಮಾನ ಮಾಡುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ದಾವಣಗೆರೆಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಿಡಿಒಗಳಿಗೆ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಲಿಂಗಾಯತರು ಅಥವಾ ಇತರೆ ವರ್ಗದವರು ಎನ್ನುವುದು ಮಾಧ್ಯಮಗಳ ಸೃಷ್ಟಿ. ರಾಜ್ಯದ ಬಿಜೆಪಿಯ ಪ್ರಮುಖ ನಾಯಕರೊಬ್ಬರು ಮುಖ್ಯಮಂತ್ರಿ ಆಗುತ್ತಾರೆ ಎಂದು ಪ್ರತಿಕ್ರಿಯೆ ವ್ಯಕ್ತಪಡಿಸಿದರು.

ನನ್ನ ಮೇಲಿನ ಪ್ರೀತಿ ಮತ್ತು ಆಸಕ್ತಿಯಿಂದ ಹಾಲುಮತ ಸಮಾಜದವರು ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ ಎಂದು ಹೇಳುತ್ತಿದ್ದಾರೆ. ಸಿಎಂ ಅಭ್ಯರ್ಥಿ ಆಯ್ಕೆ ವರಿಷ್ಠರ ತೀರ್ಮಾನ. ಅವರ ಪ್ರೀತಿಯ ಬಗ್ಗೆ ನಾನು ಸಂತೋಷಪಡುತ್ತೇನೆ. ಯಾರೂ ಈ ರೀತಿ ಮನವಿ ಮಾಡುವ ಪ್ರಯತ್ನ ಮಾಡಬೇಡಿ ಎಂದು ಮನವಿ ಮಾಡಿದರು.

ನಾನು ನೀಡಿದ ಹೇಳಿಕೆಗಳೇ ಮುಖ್ಯಮಂತ್ರಿ ಬದಲಾವಣೆಗೆ ಕಾರಣವಾಯಿತು ಎಂದು ಶಾಸಕ ಬಸನಗೌಡ ಪಾಟೀಲ್  ಹೇಳಿಕೊಳ್ಳುತ್ತಿದ್ದಾರಲ್ಲಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಹೇಳಿಕೊಳ್ಳಲಿ ಬಿಡಿ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು