ಶುಕ್ರವಾರ, ಜುಲೈ 1, 2022
23 °C

ಯಡಿಯೂರಪ್ಪ ಪ್ರಶ್ನಾತೀತ ನಾಯಕ ಬದಲಾವಣೆ ಪ್ರಶ್ನೆಯೇ ಇಲ್ಲ: ಶಾಸಕ ಎಸ್‌.ಎ.ರಾಮಚಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಜಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರಶ್ನಾತೀತ ನಾಯಕರು. ಬಿಜೆಪಿಯ ಎಲ್ಲಾ ಶಾಸಕರ ಬೆಂಬಲ ಅವರಿಗೆ ಇದೆ ಎಂದು ಜಗಳೂರು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು.

‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು, ‘ಕೊರೊನಾದಂತಹ ಸಂಕಷ್ಟ ಕಾಲದಲ್ಲಿ ಹಗಲಿರುಳು ಅವರು ಶ್ರಮಿಸುತ್ತಿದ್ದಾರೆ. ಯಾರೋ ಒಬ್ಬರ ಅಪಸ್ವರದ ಮಾತಿಗೆ ಕಿಮ್ಮತ್ತು ಕೊಡುವ ಅವಶ್ಯಕತೆ ಇಲ್ಲ. ಅತ್ಯಂತ ಕಷ್ಟಕಾಲದಲ್ಲಿ ಸರ್ಕಾರವನ್ನು ಮುನ್ನಡೆಸಿದ ಯಡಿಯೂರಪ್ಪ ಅವರು ಕೆಲವು ವ್ಯಕ್ತಿಗಳ ಮಾತುಗಳಿಂದ ನೊಂದು, ಹೈಕಮಾಂಡ್‌ ಬಯಸಿದರೆ ಸ್ಥಾನ ತ್ಯಜಿಸುವುದಾಗಿ ಹೇಳಿರಬಹುದು. ಪಕ್ಷ ಹಾಗೂ ಹೈಕಮಾಂಡ್ ಅವರ ಬೆಂಬಲಕ್ಕಿದೆ’ ಎಂದರು.

‘ಯಡಿಯೂರಪ್ಪ ಅವರನ್ನು ಬೆಂಬಲಿಸಿ ಹಲವು ಶಾಸಕರು ಸಹಿ ಮಾಡಿದ್ದು, ನಾನೂ ಸಹಿ ಮಾಡಿದ್ದೇನೆ. ಯಡಿಯೂರಪ್ಪ ಅವರಿಗೆ ಪರ್ಯಾಯ ಯಾರೂ ಇಲ್ಲ. ಮುಂದಿನ ದಿನಗಳಲ್ಲೂ ಒಳ್ಳೆಯ ಆಡಳಿತ ನೀಡುವ ಮೂಲಕ ಅವರ ನೇತೃತ್ವದಲ್ಲೇ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚಿಸಲಾಗುವುದು’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು