ದಾವಣಗೆರೆ: ‘ಭಾರತದ ಶಕ್ತಿ ಯುವ ಸಮುದಾಯದ ಮೇಲಿದೆ. ಹಾಗಾಗಿ ಮಕ್ಕಳನ್ನು ದುಶ್ಚಟಗಳಿಂದ ದೂರ ಇಟ್ಟು, ಅವರಿಗೆ ಉತ್ತಮ ಶಿಕ್ಷಣವನ್ನು ನೀಡಬೇಕು’ ಎಂದು ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಡಿ. ಕುಂಬಾರ ತಿಳಿಸಿದರು.

ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಮೈಸೂರು ಹಾಗೂ ದಾವಣಗೆರೆ ವಿಶ್ವವಿದ್ಯಾಲಯಗಳ ಪತ್ರಿಕೋದ್ಯಮ ವಿಭಾಗ ಹಾಗೂ ಯುನಿಸೆಫ್ ಹೈದರಾಬಾದ್ನ ಸಹಯೋಗದಲ್ಲಿ ಮಕ್ಕಳ ಆರೋಗ್ಯ, ಪೌಷ್ಟಿಕಾಂಶ ಮತ್ತು ರಸ್ತೆ ಸುರಕ್ಷತೆ ಕುರಿತು ಹಮ್ಮಿಕೊಂಡಿರುವ ಎರಡು ದಿನಗಳ ವಿಶೇಷ ಕಾರ್ಯಾಗಾರಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.

‘ಹಳ್ಳಿಗಳಲ್ಲಿ ಕೆಲ ಮಕ್ಕಳು ದುಶ್ಚಟಗಳಿಗೆ ದಾಸರಾಗಿ ಸಾವಿಗೀಡಾಗುತ್ತಿದ್ದಾರೆ. ಅವರಿಗೆ ಈ ಬಗ್ಗೆ ಅರಿವಿನ ಕೊರತೆ ಇದೆ. ಶಿಕ್ಷಕರು, ಪೋಷಕರು ಮಕ್ಕಳ ವರ್ತನೆಗಳನ್ನು ಸೂಕ್ಷ್ಮವಾಗಿ ಗಮನಿಸಿ ಜಾಗೃತಿ ಮೂಡಿಸಬೇಕು. ಪತ್ರಕರ್ತರು ಕೂಡ ಜವಾಬ್ದಾರಿಯಿಂದ ಮಕ್ಕಳ ಹಕ್ಕು, ಶಿಕ್ಷಣ, ರಕ್ಷಣೆ, ಕಾಯ್ದೆ–ಕಾನೂನುಗಳ ಬಗ್ಗೆ ನಿರಂತರವಾಗಿ ವರದಿಗಳನ್ನು ಬಿತ್ತರಿಸುವ ಮೂಲಕ ಅವರಿಗೆ ಉತ್ತಮ ಜೀವನವನ್ನು ಕಟ್ಟಿ ಕೊಡಬಹುದು’ ಎಂದು ತಿಳಿಸಿದರು.

ಸಂಚಾರ ನಿಯಮಗಳನ್ನು ಉಲ್ಲಂಘಿಸಿ 18 ವರ್ಷದೊಳಗಿನ ಮಕ್ಕಳು ಇಂದು ರಸ್ತೆ ಅಪಘಾತದಿಂದ ಸಾವಿಗೀಡಾಗುತ್ತಿರುವ ಬಗ್ಗೆ ಯುನಿಸೆಫ್ ಸಂವಹನ ಮತ್ತು ಸಹಭಾಗಿತ್ವ ತಜ್ಞರಾದ ಪ್ರೊಸುನ್ ಸೇನ್ ಕಳವಳ ವ್ಯಕ್ತಪಡಿಸಿದರು.

ಮಕ್ಕಳ ಹಕ್ಕುಗಳ ಚೌಕಟ್ಟು, ಕಾನೂನು, ಬಾಲಕಾರ್ಮಿಕ ಪದ್ದತಿ, ಪೋಕ್ಸೊ, ಮಕ್ಕಳ ದೌರ್ಜನ್ಯ ತಡೆ ಕಾಯ್ದೆಗಳ ಬಗ್ಗೆ ಮಾಧ್ಯಮಗಳ ಮೂಲಕ ಜಾಗೃತಿ ಮೂಡಿಸುವ ಕುರಿತು ಕರ್ನಾಟಕ ಮಕ್ಕಳ ನಿಗಾ ಕೇಂದ್ರದ ನಿರ್ದೇಶಕ ವಾಸುದೇವ್ ಶರ್ಮಾ ತಿಳಿಸಿದರು.

ಯುನಿಸೆಫ್ ಆಂಧ್ರ, ತೆಲಂಗಾಣ, ಕರ್ನಾಟಕ ಘಟಕದ ಆರೋಗ್ಯ ತಜ್ಞ ಡಾ.ಶ್ರೀಧರ್ ಪ್ರಹ್ಲಾದ್ ರ್ಯಾವನಕಿ, ಮೈಸೂರು ವಿವಿಯ ಪ್ರೊ. ಸಪ್ನಾ ಎಂ.ಎಸ್ ಹಾಗೂ ದಾವಣಗೆರೆ ವಿವಿಯ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಶಿವಕುಮಾರ್ ಕಣಸೋಗಿ, ಪತ್ರಕರ್ತರು, ವಿದ್ಯಾರ್ಥಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.