ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್‌ ಪ್ರತಿಭಟನೆ

Last Updated 11 ಏಪ್ರಿಲ್ 2022, 4:51 IST
ಅಕ್ಷರ ಗಾತ್ರ

ದಾವಣಗೆರೆ: ಪೆಟ್ರೋಲ್‌, ಡೀಸೆಲ್‌, ಅನಿಲ, ಔಷಧ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಅಣಕು ಶವಯಾತ್ರೆಯನ್ನು ಯುವ ಕಾಂಗ್ರೆಸ್‌ ವತಿಯಿಂದ ಮಾಡಿ ಭಾನುವಾರ ಪ್ರತಿಭಟನೆ ನಡೆಸಲಾಯಿತು.

ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ, ರಾಜ್ಯಾಧ್ಯಕ್ಷ ಮಹಮ್ಮದ್ ನಲಪಾಡ್‌, ಜಿಲ್ಲಾ ಅಧ್ಯಕ್ಷ ನಿಖಿಲ್ ಕೊಂಡಜ್ಜಿ ನೇತೃತ್ವದಲ್ಲಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.

ನಗರದ ಪಾಲಿಕೆ ಬಳಿ ಗಾಂಧಿ ಪುತ್ಥಳಿ, ಭಗತ್ ಸಿಂಗ್ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು. ಬಳಿಕ ಪ್ರತಿಭಟನ ಮೆರವಣಿಗೆ ಮಾಡಲಾಯಿತು. ಹಳೆ ಪಿಬಿ ರಸ್ತೆಯಿಂದ ವೀರ ರಾಣಿ ಕಿತ್ತೂರು ಚನ್ನಮ್ಮ ವೃತ್ತದವರೆಗೆ ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಸರ್ಕಾರಗಳ ವಿರುದ್ಧ ಹರಿಹಾಯ್ದರು.

ತೂತು ವಡೆ ಸೇರಿದಂತೆ ಅಣಕು ತಿಥಿಯೂಟವನ್ನು ರಸ್ತೆಯಲ್ಲಿ ಸೇವಿಸುವ ಮೂಲಕ ಅಣಕು ಶವಯಾತ್ರೆ ಮಾಡಿದರು.

ಸುಳ್ಳು ಆಶ್ವಾಸನೆಗಳನ್ನು ನೀಡಿ ಎರಡು ಸಲ ಅ„ಕಾರಕ್ಕೆ ಬಂದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬೆಲೆ ಏರಿಸುತ್ತಾ ಜನರಿಗೆ ಗಾಯದ ಮೇಲೆ ಬರೆ ಹಾಕುತ್ತಲೇ ಇದೆ. ಕೇಂದ್ರ, ರಾಜ್ಯ ಸರ್ಕಾರಗಳು ಜಾತಿ, ಧರ್ಮದ ಹೆಸರಿನಲ್ಲಿ ಸಾಮರಸ್ಯ ಕದಡುವ ಕೆಲಸ ಮಾಡುತ್ತಿವೆ. ಜನ ವಿರೋಧಿ, ರೈತ ವಿರೋಧಿ, ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಾ, ದೇಶ ವಾಸಿಗಳ ಬದುಕಿನೊಂದಿಗೆ ಆಟವಾಡುತ್ತಿದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ಸಂಜೆ ಇಲ್ಲಿನ ಪೂಜಾ ಇಂಟರ್ ನ್ಯಾಷನಲ್ ಹೊಟೆಲ್‍ನಲ್ಲಿ ಯುವ ಕಾಂಗ್ರೆಸ್ ಸಭೆ ನಡೆಯಿತು. ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ, ರಾಜ್ಯ ಅಧ್ಯಕ್ಷ ಮಹಮ್ಮದ್ ನಲಪ್ಪಾಡ್, ಕೆಪಿಸಿಸಿ ವಕ್ತಾರ ಡಿ.ಬಸವರಾಜ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ ಕೆ.ಶೆಟ್ಟಿ ಮಾತನಾಡಿದರು. ಎಲ್.ಎಂ.ಎಚ್.ಸಾಗರ್, ಎಚ್.ಜೆ.ಮೈನುದ್ದೀನ, ಆರ್.ಬಿ.ಜೆಡ್. ಬಾಷಾ, ಕೆ.ಎಲ್. ಹರೀಶ ಬಸಾಪುರ, ಸೈಯದ್ ಖಾಲಿದ್ ಅಹಮ್ಮದ್, ರಂಜಿತ್, ತಿಪ್ಪೇಶ್, ರಾಘವೇಂದ್ರ ಗೌಡ, ಬೇತೂರು ಚೇತನ್, ಸಂತೋಷ ಅವರೂ ಪ್ರತಿಭಟನೆಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT