ಭಾನುವಾರ, ಮಾರ್ಚ್ 26, 2023
24 °C

ಕೆಂಗಾಪುರ: ಕಬ್ಬಿಣದ ರಥಕ್ಕೆ ವಿದ್ಯುತ್‌ ತಂತಿ ತಗುಲಿ ಯುವಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ಕೆಂಗಾಪುರ ಗ್ರಾಮದಲ್ಲಿ ಬುಧವಾರ ನಡೆದ ದುರ್ಗಾದೇವಿ ಜಾತ್ರೆಯಲ್ಲಿ ಕಬ್ಬಿಣದ ರಥಕ್ಕೆ ವಿದ್ಯುತ್‌ ತಂತಿ ತಗುಲಿದ ಪರಿಣಾಮ ಯುವಕನೊಬ್ಬ ಮೃತಪಟ್ಟಿದ್ದು, 13 ಜನ ಗಾಯಗೊಂಡಿದ್ದಾರೆ.

ವಿದ್ಯುತ್‌ ಆಘಾತದಿಂದ ಕೆಂಗಾಪುರದ ಅರ್ಜುನ್‌ (23) ಮೃತಪಟ್ಟಿದ್ದಾರೆ. ಅದೇ ಗ್ರಾಮದ ಕಾರ್ತಿಕ್‌ ಎಂಬ ಯುವಕ ತೀವ್ರವಾಗಿ ಅಸ್ವಸ್ಥಗೊಂಡಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡ ಉಳಿದ 12 ಜನ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪ್ರತಿ ವರ್ಷದಂತೆ ದುರ್ಗಾದೇವಿ ಜಾತ್ರೆ ನಡೆಯುತ್ತಿತ್ತು. ಬೆಳಿಗ್ಗೆ ರಥೋತ್ಸವ ಆರಂಭಗೊಂಡಾಗ ವಿದ್ಯುತ್‌ ತಂದಿಯು ರಥಕ್ಕೆ ತಗುಲಿದೆ. ಕಬ್ಬಿಣದಿಂದ ರಥವನ್ನು ನಿರ್ಮಿಸಿರುವುದರಿಂದ ವಿದ್ಯುತ್‌ ಸ್ಪರ್ಶವಾಗಿ ಅವಘಡ ಸಂಭವಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು