ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವಕನ ಸಾವು: ನೇತ್ರದಾನ

Published 6 ಮೇ 2024, 4:43 IST
Last Updated 6 ಮೇ 2024, 4:43 IST
ಅಕ್ಷರ ಗಾತ್ರ

ಕಡರನಾಯ್ಕನಹಳ್ಳಿ: ಸಮೀಪದ ಹೊಳೆಸಿರಿಗೆರೆ ಗ್ರಾಮದ ಯುವಕ ಸುನಿಲ್ ಕುಮಾರ್ ಮುನಿಯಪ್ಳ (22) ಅವರು ಭಾನುವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು. ಅವರ ನೇತ್ರಗಳನ್ನು ದಾವಣಗೆರೆ ಚಿಗಟೇರಿ ಆಸ್ಪತ್ರೆಗೆ ನೀಡಲಾಗಿದೆ. 

ಇವರು ಹನುಮಂತಪ್ಪ ಮುನಿಯಪ್ಳ–ಮಮತಾ ಅವರ ಪುತ್ರ. ಅವರ ಪಾಲಕರು ಮಗನ ನೇತ್ರಗಳನ್ನು ದಾನ ಮಾಡುವ ಮೂಲಕ, ಅಂಧರಿಗೆ  ಅನುಕೂಲವಾಗುವಂತೆ ಮಾಡಿದ್ದಾರೆ. ನೇತ್ರದಾನ ತೀರ್ಮಾನವನ್ನು ಗ್ರಾಮಸ್ಥರು ಪ್ರಶಂಸಿಸಿದ್ದಾರೆ.

ಮೃತರಿಗೆ ಸಹೋದರ ಇದ್ದಾರೆ. ಅಂತ್ಯಕ್ರಿಯೆ ಭಾನುವಾರ ಸಂಜೆ ನೆರವೇರಿತು.

Cut-off box - ‘ತ್ಯಾಜ್ಯ ವಿಲೇವಾರಿ ಘಟಕ ಸ್ಥಳಾಂತರಿಸಿ’ ದಾವಣಗೆರೆ: ‘ಪಾಲಿಕೆ ನಿರ್ವಹಿಸುವ ಘನ ತ್ಯಾಜ್ಯ ವಿಲೇವಾರಿ ಘಟಕವನ್ನು ಆವರಗೊಳ್ಳ ಗ್ರಾಮದಿಂದ ತಕ್ಷಣವೇ ಸ್ಥಳಾಂತರ ಮಾಡಬೇಕು. ಇಲ್ಲವಾದಲ್ಲಿ ಹೋರಾಟ ರೂಪಿಸಲಾಗುವುದು’ ಎಂದು ಗ್ರಾಮದ ಮುಖಂಡರು ಎಚ್ಚರಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗ್ರಾಮದ ಮುಖಂಡ ಬಿ.ಎಂ.ಷಣ್ಮುಖಯ್ಯ ‘ಕಳೆದ 20 ವರ್ಷಗಳಿಂದ ಆವರಗೊಳ್ಳ ಗ್ರಾಮಸ್ಥರ ವಿರೋಧದ ನಡುವೆಯೂ ಘನತ್ಯಾಜ್ಯ ವಿಲೇವಾರಿ ಘಟಕವನ್ನು ನಿರ್ವಹಿಸಲಾಗುತ್ತಿದೆ’ ಎಂದು ದೂರಿದರು. ‘ತ್ಯಾಜ್ಯದ ದುಷ್ಪರಿಣಾಮದ ಬಗ್ಗೆ ಅಧಿಕಾರಿಗಳು ಜನಪ್ರತಿನಿಧಿಗಳಿಗೆ ತಿಳಿಸುತ್ತಾ ಬಂದಿದ್ದೇವೆ. ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಿ ತ್ಯಾಜ್ಯ ಸಂಸ್ಕರಣೆ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆಯೇ ಹೊರತು ಯಾವುದೇ ಕೆಲಸ ಮಾಡಿಲ್ಲ’ ಎಂದು ಕಿಡಿಕಾರಿದರು. ‘ಜಿಲ್ಲಾ ಪಂಚಾಯಿತಿ ತಾಲ್ಲೂಕು ಪಂಚಾಯಿತಿ ಮತ್ತು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣಕ್ಕೆ ದೂರು ನೀಡಿದ್ದರೂ ಪ್ರಯೋಜನವಾಗಿಲ್ಲ. ತ್ಯಾಜ್ಯ ವಿಲೇವಾರಿ ಘಟಕದ ಬಳಿ ಯಾವುದೇ ವಿಪತ್ತು ನಿರ್ವಹಣಾ ವ್ಯವಸ್ಥೆಯನ್ನು ಮಾಡಿಲ್ಲ. ಬೆಂಕಿ ಅವಘಡದಿಂದ ಬೆಳೆನಾಶ ಆಗುತ್ತಿದೆ. ಬೆಂಕಿ ನಂದಿಸುವ ವಾಹನ ಇರಿಸಿ ಕಾವಲುಗಾರರನ್ನು ನೇಮಿಸಬೇಕು’ ಎಂದು ಒತ್ತಾಯಿಸಿದರು. ಗ್ರಾಮಸ್ಥರಾದ ಬಿ.ವೀರಯ್ಯ ಬಿ.ಶಶಿಧರಯ್ಯ ವೀರ ರಾಜೇಂದ್ರ ಸ್ವಾಮಿ ರುದ್ರಮುನಿಯಪ್ಪ ಪೂಜಾರ ಬಸವರಾಜಯ್ಯ ವೀರಯ್ಯ ಮಾಗನೂರು ಬಸವರಾಜ್ ಮುಂತಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT