ದಾವಣಗೆರೆ: ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಮಾಜಿ ಸಚಿವ ಜಮೀರ್ ಅಹಮ್ಮದ್ ಖಾನ್ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು ಎಂದು ಕೋರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿ ವರಿಷ್ಠರಿಗೆ ಸ್ಥಳೀಯ ಮುಖಂಡರು ಪತ್ರ ಬರೆದಿದ್ದಾರೆ.

ಮಾಜಿ ಮೇಯರ್ ಕೆ. ಚಮನ್ ಸಾಬ್ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ ಅವರು ಉಸ್ತುವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಪತ್ರದ ಮೂಲಕ ಮನವಿ ಮಾಡಿದ್ದಾರೆ.

‘ಇತ್ತೀಚೆಗೆ ನಡೆದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ವಿರುದ್ಧ ಮಾಜಿ ಸಚಿವ ಬಿ.ಝಡ್. ಜಮೀರ್ ಅಹಮ್ಮದ್ ಖಾನ್ ಕೆಲಸ ಮಾಡಿರುವುದು ಬಹಿರಂಗವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಆಡಿಯೊದಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವುದು ದೃಢಪಟ್ಟಿದೆ’ ಎಂದು ದೂರಿದ್ದಾರೆ.

‘ಬೆಂಬಲಿಗರೊಂದಿಗೆ ಮಾತನಾಡಿರುವ ಜಮೀರ್, ಕಾಂಗ್ರೆಸ್ ಅಭ್ಯರ್ಥಿಗೆ ಮುಸ್ಲಿಂ ಸಮುದಾಯದ ಮತಗಳು ಬೀಳದಂತೆ ನೋಡಿಕೊಳ್ಳುವಂತೆ ಸೂಚಿಸಿದ್ದಾರೆ. ಮತ್ತೊಂದು ರಾಜಕೀಯ ಪಕ್ಷದ ಅಭ್ಯರ್ಥಿಯ ‘ಕುಕ್ಕರ್’ ಗುರುತಿಗೆ ಹಾಗೂ ಪಕ್ಷೇತರ ಅಭ್ಯರ್ಥಿಗೆ ಮತ ಚಲಾವಣೆ ಮಾಡುವಂತೆ ಮಸ್ಲಿಂ ಸಮುದಾಯವನ್ನು ಪ್ರಚೋದಿಸಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಪಕ್ಷದ ಹಿರಿಯ ನಾಯಕರಾಗಿ ಮತ್ತು ಜವಾಬ್ದಾರಿಯುತ ಸಚಿವರಾಗಿದ್ದ ಅವರು ಉಪಚುನಾವಣೆಯ ಸಂದರ್ಭದಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯ ಸೋಲಿಗೆ ಸಂಚು ರೂಪಿಸಿರುವುದು ತಳಮಟ್ಟದ ಕಾರ್ಯಕರ್ತರಲ್ಲಿ ತೀವ್ರ ನಿರಾಶೆ ಮತ್ತು ಆಕ್ರೋಶವನ್ನು ಉಂಟುಮಾಡಿದೆ. ಇದು ಪಕ್ಷದ ಶಿಸ್ತು ಮತ್ತು ಸಿದ್ಧಾಂತಕ್ಕೆ ಬಗೆದ ದ್ರೋಹವಾಗಿದೆ. ಈ ಸಂಭಾಷಣೆಯ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕು. ಪಕ್ಷದ ಘನತೆಗೆ ಧಕ್ಕೆ ತಂದಿರುವ ಜಮೀರ್ ವಿರುದ್ಧ ತಕ್ಷಣವೇ ಶಿಸ್ತು ಕ್ರಮ ಜರುಗಿಸಬೇಕು’ ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.