ಸೋಮವಾರ, ಜನವರಿ 25, 2021
15 °C

ಜಿ.ಪಂ. ಅಧ್ಯಕ್ಷೆ ದೀಪಾ ಜಗದೀಶ್‌ ರಾಜೀನಾಮೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ದೀಪಾ ಜಗದೀಶ್‌ ರಾಜೀನಾಮೆ ಸಲ್ಲಿಸಿದ್ದಾರೆ. ಉಪಾಧ್ಯಕ್ಷರಾಗಿರುವ ಸಾಕಮ್ಮ ಬಿ.ಎಸ್‌. ಗಂಗಾಧರ ನಾಯ್ಕ್‌ ಪ್ರಭಾರ ಅಧ್ಯಕ್ಷರಾಗಿದ್ದಾರೆ.

ದೀಪಾ ಅವರನ್ನು ಅಧ್ಯಕ್ಷರನ್ನಾಗಿ ಜೂನ್‌ 11ಕ್ಕೆ ಆಯ್ಕೆ ಮಾಡಲಾಗಿತ್ತು. ಸ್ವಇಚ್ಛೆಯಿಂದ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿ ನ.23ರಂದು ರಾಜೀನಾಮೆ ಸಲ್ಲಿಸಿದ್ದರು. ಡಿ.7ರವರೆಗೆ ಅವರು ರಾಜೀನಾಮೆ ಹಿಂಪಡೆಯದ ಕಾರಣ ಡಿ. 8ರಂದು ರಾಜೀನಾಮೆಯನ್ನು ಅಂಗೀಕರಿಸಲಾಗಿದೆ. ಮುಂದಿನ ಅಧ್ಯಕ್ಷರ ಆಯ್ಕೆ ಆಗುವವರೆಗೆ ಅಧ್ಯಕ್ಷ ಸ್ಥಾನವನ್ನು ನಿರ್ವಹಿಸುವಂತೆ ಜಿಲ್ಲಾ ಪಂಚಾಯಿತಿ ಸಿಇಒ ಪದ್ಮ ಬಸವಂತಪ್ಪ ಅವರು ಉಪಾಧ್ಯಕ್ಷರನ್ನು ಕೋರಿದ್ದಾರೆ.

ಸ್ವಇಚ್ಛೆಯಿಂದ ರಾಜೀನಾಮೆ ನೀಡಿರುವುದಾಗಿ ಕಾರಣವನ್ನು ತಿಳಿಸಿದ್ದರೂ ಬಿಜೆಪಿ ಒಳಗೆ ಮೊದಲೇ ಆಗಿರುವ ತೀರ್ಮಾನದಂತೆ ರಾಜೀನಾಮೆ ನೀಡಿದ್ದಾರೆ. ನಾಲ್ಕು ತಿಂಗಳ ಮಟ್ಟಿಗೆ ಮಾತ್ರ ಅವರಿಗೆ ಅಧ್ಯಕ್ಷತೆಯ ಅವಕಾಶ ನೀಡಲಾಗಿತ್ತು. ಹಾಗಾಗಿ ಅಕ್ಟೋಬರ್‌ 11ರ ಒಳಗೆ ರಾಜೀನಾಮೆ ಸಲ್ಲಿಸಬೇಕಿತ್ತು. ಕೊರೊನಾ ಕಾರಣದಿಂದ ಹೆಚ್ಚುವರಿಯಾಗಿ ಸುಮಾರು ಎರಡು ತಿಂಗಳು ಅವಕಾಶ ದೊರೆತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು