ಹರಪನಹಳ್ಳಿ: ಗ್ರಾಮಾಂತರ ಪ್ರದೇಶದ ಬಡ ಹಾಗೂ ನಿರ್ಗತಿಕ ಕುಟುಂಬಗಳ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ನೇರವಾಗಿ ಮನೆಬಾಗಿಲಿಗೆ ಉಚಿತವಾದ ಆರೋಗ್ಯ ಸೇವೆಯನ್ನು ಕಲ್ಪಿಸಿದೆ. ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳುವಂತೆ ಚಿಗಟೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ದತ್ತಾತ್ರೇಯ ಪಿಸೆ ಕರೆ ನೀಡಿದರು.

ಶನಿವಾರ ಕೇಂದ್ರದ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮುದಾಯ ಆರೋಗ್ಯ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಇದೇ ಸಂದರ್ಭದಲ್ಲಿ 56ಮಂದಿ ಗರ್ಭಿಣಿ ಮಹಿಳೆಯರಿಗೆ ಸಾಮೂಹಿಕ ಉಡಿತುಂಬುವ ಸೀಮಂತ ಕಾರ್ಯಕ್ರಮ ನಡೆಸಲಾಯಿತು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಆರ್. ಸಿದ್ದೇಶಪ್ಪ, ಪ್ರಾಂಶುಪಾಲ ಮಂಜುನಾಥ, ಗ್ರಾ.ಪಂ. ಸದಸ್ಯ ಬಿ. ಬಸವರಾಜಪ್ಪ, ಮುಬಿನಾಬಿ, ಎಂ. ಸಿದ್ದಮ್ಮ, ಸಾವಿತ್ರಮ್ಮ, ಲಕ್ಷ್ಮೀ ಇತರರು ಉಪಸ್ಥಿತರಿದ್ದರು. ಹಿರಿಯ ಆರೋಗ್ಯ ಸಹಾಯಕ ವಿ.ಎಸ್. ಹಿರೇಮಠ ಸ್ವಾಗತಿಸಿದರು. ಎಸ್. ಗಾಯತ್ರಿದೇವಿ ಪ್ರಾರ್ಥಿಸಿದರು. ಬಿ. ರುದ್ರಾಚಾರಿ ಕಾರ್ಯಕ್ರಮ ನಿರೂಪಿಸಿದರು.

ಇಂದು ಪ್ರತಿಭಟನೆ

ಚನ್ನಗಿರಿ: ಪಟ್ಟಣದ ಸರಕಾರಿ ಆಸ್ಪತ್ರೆಗೆ ಅಗತ್ಯ ಇರುವ ವೈದ್ಯರುಗಳ ನೇಮಕ, ಕೆಲವು ಇಲಾಖೆಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಪಡಿತರ ಚೀಟಿ ವಿತರಣೆ ವಿಳಂಬ ಖಂಡಿಸಿ ಕರವೇ ತಾಲ್ಲೂಕು ಘಟಕದ ವತಿಯಿಂದ 19ರಂದು ಬೆಳಿಗ್ಗೆ 11 ಗಂಟೆಗೆ ಬೃಹತ್ ಪ್ರತಿಭಟನೆ ಹಾಗೂ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಎಂ. ಯೋಗೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.