ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಶಕ್ತಿ ಪ್ರದರ್ಶನ’

Last Updated 16 ಏಪ್ರಿಲ್ 2017, 7:28 IST
ಅಕ್ಷರ ಗಾತ್ರ

ದಾವಣಗೆರೆ: ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಬಲ ಪ್ರದರ್ಶಿಸಿದೆ ಎಂದು ಪಕ್ಷದ ವಕ್ತಾರ ಶಾಮನೂರು ಬಸವರಾಜ್ ಹೇಳಿದರು.‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭಿವೃದ್ಧಿ ಕಾರ್ಯಗಳಿಗೆ ಪ್ರತಿಫಲವಾಗಿ ಉಪ ಚುನಾವಣೆ ಯಲ್ಲಿ ಗೆಲುವು ದೊರೆತಿದೆ. ತೀವ್ರ ಜಿದ್ದಾಜಿದ್ದಿನ ಹೋರಾಟದಲ್ಲಿ ಕಾಂಗ್ರೆಸ್‌ ಜಯಗಳಿಸುವ ಮೂಲಕ ಬಿಜೆಪಿಗೆ ತಕ್ಕ ಉತ್ತರ ನೀಡಿದೆ’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಅಧಿಕಾರದ ಆಸೆಗಾಗಿ ಬಿಜೆಪಿಗೆ ಹೋಗಿದ್ದ ಶ್ರೀನಿವಾಸ್ ಪ್ರಸಾದ್‌ಗೆ ನಂಜನಗೂಡು ಕ್ಷೇತ್ರದ ಮತದಾರರು ತಕ್ಕಪಾಠ ಕಲಿಸಿದ್ದಾರೆ. ಗುಂಡ್ಲುಪೇಟೆ ಕ್ಷೇತ್ರದಲ್ಲಿ ದಿವಂಗತ ಮಹದೇವ ಪ್ರಸಾದ್ ಅವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಮತದಾರರು ಪತ್ನಿ ಮೋಹನ್‌ ಕುಮಾರಿ ಅವರನ್ನು ಗೆಲ್ಲಿಸುವ ಮೂಲಕ ಬಿಜೆಪಿ ಲೆಕ್ಕಾಚಾರಗಳನ್ನು ತಲೆಕೆಳಗೆ ಮಾಡಿದ್ದಾರೆ’ ಎಂದು ತಿಳಿಸಿದರು.

‘ಗುಂಡ್ಲುಪೇಟೆಯಲ್ಲಿ ವೀರಶೈವ ಸಮುದಾಯದ ಮತಗಳನ್ನು ಸೆಳೆಯುವಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ ಮಹತ್ವದ ಪಾತ್ರ ವಹಿಸಿದ್ದಾರೆ. ಲಿಂಗಾಯತ ಮುಖಂಡರ ಜತೆ ನಿರಂತರ ಸಭೆ ನಡೆಸುವ ಮೂಲಕ ಮತದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಹಾಗೆಯೇ ನಂಜನಗೂಡಿನಲ್ಲಿ  ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ, ಎಂ.ಬಿ.ಪಾಟೀಲ ಅವರ ತಂತ್ರಗಾರಿ ಕೆಯೂ ಫಲನೀಡಿತು ಎಂದರು.

ಜಿಲ್ಲೆಯಲ್ಲಿ ಎಸ್‌ಎಸ್‌ ಹಾಗೂ ಎಸ್ಸೆಸ್ಸೆಎಂ ನೇತೃತ್ವದಲ್ಲಿ ಅಭಿವೃದ್ಧಿ ಕಾರ್ಯಗಳು ಭರದಿಂದ ಸಾಗುತ್ತಿವೆ. ನೂರಾರು ಕೋಟಿ ವೆಚ್ಚದಲ್ಲಿ ಕಾಂಕ್ರೀಟ್‌ ರಸ್ತೆಗಳು ನಿರ್ಮಾಣ ವಾಗುತ್ತಿವೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಒತ್ತು ನೀಡಲಾಗಿದೆ ಎಂದರು.ಮುಖಂಡರಾದ ಕೆ.ಜಿ. ಶಿವಕುಮಾರ್, ಕಿರುವಾಡಿ ಸೋಮಣ್ಣ, ದೊಗ್ಗಳ್ಳಿ ಬಸಣ್ಣ, ಜಿ.ಬಿ.ಲಿಂಗರಾಜ್‌, ಬೊಮ್ಮನಹಳ್ಳಿ ರಾಮಣ್ಣ, ಚಂದನ್ ಪಲ್ಲಾಗಟ್ಟೆ ಸುದ್ದಿಗೋಷ್ಠಿಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT