ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆ ಸಂಗೊಳ್ಳಿ ರಾಯಣ್ಣ ಸ್ಮರಣೆ

Last Updated 25 ಜನವರಿ 2012, 6:00 IST
ಅಕ್ಷರ ಗಾತ್ರ

ದಾವಣಗೆರೆ: ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಸೇನೆ ವತಿಯಿಂದ ಜ. 26ರಂದು `ಸಂಗೊಳ್ಳಿ ರಾಯಣ್ಣ ಸ್ಮರಣೋತ್ಸವ~ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಅಂದು ಸಂಜೆ 5ಕ್ಕೆ ನಗರದ ರೋಟರಿ ಬಾಲಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಸಿದ್ದಲಿಂಗೇಶ್ವರ ಸ್ವಾಮೀಜಿ ನೇತೃತ್ವ ವಹಿಸಲಿದ್ದಾರೆ. ಪ್ರೊ.ಮಲ್ಲಿಕಾ ಘಂಟಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಯುವಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಬಿ. ರೇವಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಯುವಸೇನೆಯ ಕಾರ್ಯದರ್ಶಿ ಪಿ. ಲಕ್ಕಪ್ಪ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಮೇಯರ್ ಎಚ್.ಎನ್. ಗುರುನಾಥ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಎಚ್. ವಿಜಯಕುಮಾರ್, `ದೂಡಾ~ ಸದಸ್ಯ ಸಿದ್ದಪ್ಪ, ಪಾಲಿಕೆ ಸದಸ್ಯೆ ಬಸಮ್ಮ ಹನುಮಂತಪ್ಪ ಅವರನ್ನು ಸನ್ಮಾನಿಸಲಾಗುವುದು ಎಂದು ಮಾಹಿತಿ ನೀಡಿದರು.
ಮಾಜಿ ಶಾಸಕ ಕೆ. ಮಲ್ಲಪ್ಪ, ಕೆಂಗೋ ಹನುಮಂತಪ್ಪ, ಬಿ.ಎಂ. ಸತೀಶ್, ಪಿ. ರಾಜಕುಮಾರ್, ಬಿ. ದಿಳ್ಳೆಪ್ಪ, ಪುಷ್ಪಾ ಆನಂದ್, ಬಳ್ಳಾರಿ ಷಣ್ಮುಖಪ್ಪ, ಬಾಗೂರು ಆನಂದಪ್ಪ, ಬಿ.ಎಚ್. ಪರಶುರಾಮಪ್ಪ, ಎಚ್.ವೈ. ಶಶಿಧರ್, ತಿಪ್ಪಮ್ಮ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಹೋರಾಟಗಾರ ಸಂಗೊಳ್ಳಿ ರಾಯಣ್ಣ ಅವರನ್ನು ಇಂದು ಸ್ಮರಣೆ ಮಾಡಿಕೊಳ್ಳುವುದು ಅಗತ್ಯ. ಯುವಪೀಳಿಗೆಗೆ ಅವರ ಆದರ್ಶ ಹಾಗೂ ಹೋರಾಟದ ಬಗ್ಗೆ ತಿಳಿಸುವ ಪ್ರಯತ್ನವನ್ನು ಮುಂದಿನ ದಿನಗಳಲ್ಲಿ ಮಾಡಲಾಗುವುದು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಬಿ. ರೇವಣ್ಣ, ಎಚ್.ವೈ. ಶಶಿಧರ್, ಎಸ್.ಎಸ್. ಗಿರೀಶ್, ಅಣಬೇರು ಶಿವಮೂರ್ತಿ, ಬಾತಿ ನಾಗರಾಜ್, ಪ್ರಕಾಶ್, ಚಿಕ್ಕಣ್ಣ ಇತರರು ಹಾಜರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT