ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುರ್ತು ಬಳಕೆ; ₨ 50 ಲಕ್ಷ ತಹಶೀಲ್ದಾರ್ ಖಾತೆಗೆ

ನೆರೆ, ಪ್ರವಾಹ ಪರಿಹಾರ ಕ್ರಮಗಳ ಕುರಿತ ಸಭೆಯಲ್ಲಿ ಜಿಲ್ಲಾಧಿಕಾರಿ ಸೂಚನೆ
Last Updated 22 ಆಗಸ್ಟ್ 2019, 13:34 IST
ಅಕ್ಷರ ಗಾತ್ರ

ಶಿವಮೊಗ್ಗ: ಅತಿವೃಷ್ಟಿ, ಪ್ರವಾಹ ಪರಿಸ್ಥಿತಿಗೆ ತಕ್ಷಣದ ಪರಿಹಾರ ನೀಡಲುಪ್ರತಿ ತಹಶೀಲ್ದಾರ್ ಖಾತೆಗೆ ₨ 50 ಲಕ್ಷ ಜಮೆ ಮಾಡಲಾಗುವುದು. ತುರ್ತು ಆವಶ್ಯಕತೆಗಳಿಗೆ ಈ ಹಣ ಬಳಸಬಹುದು ಎಂದುಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನೆರೆ, ಪ್ರವಾಹ ಪರಿಹಾರ ಕ್ರಮಗಳ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಯ ನಿಖರ ಸಮೀಕ್ಷೆ ನಡೆಸಿ, ತ್ವರಿತವಾಗಿ ವರದಿ ನೀಡಬೇಕು.ಕೃಷಿ, ತೋಟಗಾರಿಕಾ ಬೆಳೆಗಳಿಗೆ, ಪೂರ್ಣ ಹಾಗೂ ಭಾಗಶಃ ಹಾನಿಗೀಡಾಗಿರುವ ಮನೆಗಳಿಗೆ ಪರಿಹಾರ ನೀಡುವ ಕಾರ್ಯ ಚುರುಕುಗೊಳಿಸಬೇಕು. ಹಾನಿ ಸಮೀಕ್ಷೆ ಸರಿಯಾಗಿ ಮಾಡಬೇಕು. ಯಾರಿಗೂ ಅನ್ಯಾಯವಾಗದಂತೆ ಎಚ್ಚರವಹಿಸಬೇಕು. ಹಾನಿಗೀಡಾದ ಪ್ರತಿಯೊಬ್ಬರಿಗೂ ಸಮರ್ಪಕ ಪರಿಹಾರ ಸಿಗುವಂತೆ ಖಾತ್ರಿಪಡಿಸಬೇಕು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಸೂಚಿಸಿದರು.

ತೀರ್ಥಹಳ್ಳಿ ತಾಲೂಕಿನಲ್ಲಿ ನೆರೆ ಹಾವಳಿಯಿಂದ ಹಾನಿಗೀಡಾಗಿರುವ ಮನೆಗಳು, ಕೃಷಿ ಮತ್ತು ತೋಟಗಾರಿಕಾ ಪ್ರದೇಶಗಳ ಬಗ್ಗೆ ಸರಿಯಾಗಿ ಸಮೀಕ್ಷೆ ನಡೆಸಿಲ್ಲ. ತೀರ್ಥಹಳ್ಳಿಯಲ್ಲಿ ಕೆಲವು ಮನೆಗಳು ಸಂಪೂರ್ಣ ಕುಸಿದಿದ್ದರೂ ಅದನ್ನು ಪಟ್ಟಿಯಲ್ಲಿ ಸೇರಿಸಲಾಗಿಲ್ಲ. ಇಲಾಖೆಗಳ ನಡುವೆ ಸಮನ್ವಯದ ಕೊರತೆ ಇದೆ ಎಂದು ಶಾಸಕ ಅರಗ ಜ್ಞಾನೇಂದ್ರ ದೂರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಸಮರ್ಪಕ ಮಾಹಿತಿ ಒದಗಿಸದ ಕಂದಾಯ ಅಧಿಕಾರಿಗಳಿಗೆ ನೊಟೀಸ್ ನೀಡಬೇಕು. ತಕ್ಷಣ ಸಮರ್ಪಕ ಮಾಹಿತಿ ಒದಗಿಸಬೇಕು ಎಂದು ತಾಕೀತು ಮಾಡಿದರು.

ಶಾಲೆ ಸಮೀಕ್ಷೆ ಖಾತ್ರಿಪಡಿಸಿ:

ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಅತಿವೃಷ್ಟಿ ಬಳಿಕ ಶಾಲಾ ಕಟ್ಟಡಗಳ ಸುರಕ್ಷತೆ ಬಗ್ಗೆ ಪರಿಶೀಲನೆ ನಡೆಸಿ ಪ್ರಮಾಣ ಪತ್ರ ಒದಗಿಸುವಂತೆ ಸೂಚನೆ ನೀಡಿದ್ದರೂ, ಪರಿಶೀಲನೆ ನಡೆಸಿಲ್ಲ ಎಂದು ಆರಗ ಆರೋಪಿಸಿದರು.

ಶಾಸಕ ಹಾಲಪ್ಪ ಹರತಾಳು ಮಾತನಾಡಿ, ಹಲವು ರೈತರ ಗದ್ದೆಗಳಲ್ಲಿ ಮರಳು ಮತ್ತು ಮಣ್ಣು ತುಂಬಿ ಬೆಳೆ ಹಾನಿಯಾಗಿದೆ. ತೆರವುಗೊಳಿಸಲು ರೈತರಿಗೆ ತಕ್ಷಣ ₨ 10ಸಾವಿರ ನೆರವು ಒದಗಿಸಬೇಕು ಎಂದು ಒತ್ತಾಯಿಸಿದರು.

ಕೃಷಿ ಭೂಮಿಯಲ್ಲಿ ಕನಿಷ್ಠ 3 ಇಂಚಿನಷ್ಟು ಮರಳು ಮತ್ತು ಮಣ್ಣು ತುಂಬಿದ್ದರೆ ಹೆಕ್ಟೇರ್‌ಗೆ ₨ 12,200 ಹಾಗೂ ಅದಕ್ಕಿಂತ ಹೆಚ್ಚಿನ ಹಾನಿಗೆ₨ 35,500 ಪರಿಹಾರ ನೀಡಲಾಗುವುದು. ಜಿಲ್ಲೆಯಲ್ಲಿ 903 ಹೆಕ್ಟೇರ್ ಕೃಷಿ ಭೂಮಿಯಲ್ಲಿ ಮೂರು ಇಂಚಿನಷ್ಟು ಹೂಳು ತುಂಬಿದೆ. ಪರಿಹಾರ ಒದಗಿಸಲಾಗುವುದು ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಕಿರಣಕುಮಾರ್ವಿವರ ನೀಡಿದರು.

ನಗರ ಪಾಲಿಕೆ ವ್ಯಾಪ್ತಿಯಲ್ಲಿ ನೆರೆಯಿಂದ ಪೀಡಿತವಾದ 4,573ಮನೆಗಳನ್ನು ಗುರುತಿಸಲಾಗಿದೆ. ಪರಿಹಾರ ಕೋರಿ ತಹಶೀಲ್ದಾರ್ ಅವರಿಗೆ ಪ್ರಸ್ತಾವ ಸಲ್ಲಿಸಲಾಗಿದೆ. ಕೆಲವು ಮನೆಗಳ ಸಮೀಕ್ಷೆ ಕಾರ್ಯ ನಡೆಸಬೇಕಾಗಿದೆ ಎಂದು ಆಯುಕ್ತೆ ಚಾರುಲತಾ ಸೋಮಲ್ ಮಾಹಿತಿ ನೀಡಿದರು.

ಶಾಸಕರಾದ ಕೆ.ಬಿ.ಅಶೋಕ ನಾಯ್ಕ, ಎಸ್.ರುದ್ರೇಗೌಡ, ಆಯನೂರು ಮಂಜುನಾಥ, ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT