ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ವಾರಿಗಳಲ್ಲಿ ಮರಳು ತೆಗೆಯಲು ತ್ವರಿತ ಅನುಮತಿ

ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಜಿಲ್ಲಾಧಿಕಾರಿ ಶಿವಕುಮಾರ್ ಸೂಚನೆ
Last Updated 10 ಫೆಬ್ರುವರಿ 2020, 14:27 IST
ಅಕ್ಷರ ಗಾತ್ರ

ಶಿವಮೊಗ್ಗ: ಜಿಲ್ಲೆಯ 20 ಮರಳು ಬ್ಲಾಕ್‍ಗಳಲ್ಲಿ ಮರಳು ತೆಗೆಯಲು ವಾರದ ಒಳಗೆಅನುಮತಿ ನೀಡಬೇಕು ಎಂದುಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಮರಳು ಸಮಿತಿ ಸಭೆಯಲ್ಲಿ ಅವರುಮಾತನಾಡಿದರು.

ಜಿಲ್ಲೆಯ ಹಲವು ಭಾಗಗಳಲ್ಲಿ ಇನ್ನೂನದಿಯನೀರು ಇಳಿದಿಲ್ಲ. ಹಾಗಾಗಿ, ಮರಳುತೆಗೆಯುವ ಪ್ರಕ್ರಿಯೆ ವಿಳಂಬವಾಗಿದೆ.ಜಿಲ್ಲೆಯಲ್ಲಿ 28 ಬ್ಲಾಕ್‍ಗಳಿವೆ. 8ರಲ್ಲಿ ಮರಳುಗಾರಿಕೆಆರಂಭಿಸಲಾಗಿದೆ.ತೀರ್ಥಹಳ್ಳಿಯ 13 ಬ್ಲಾಕ್‍ಗಳಲ್ಲಿ ಎರಡರಲ್ಲಿ ಮರಳು ತುಂಬಲಾಗುತ್ತಿದೆ ಎಂದರು.

ಅಕ್ರಮ ಮರಳುಗಾರಿಕೆ ಕುರಿತು ಸಾಕಷ್ಟು ದೂರುಗಳು ಬರುತ್ತಿವೆ.ಅಕ್ರಮ ತಡೆಗೆಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಪೊಲೀಸ್, ಕಂದಾಯ, ಗಣಿ ಮತ್ತು ಭೂವಿಜ್ಞಾನಅಧಿಕಾರಿಗಳು‌ಜಂಟಿಯಾಗಿ ಕಾರ್ಯ ನಿರ್ವಹಿಸಬೇಕು. ಕೋಟೆಗಂಗೂರಿನಲ್ಲಿ ಅಕ್ರಮ ಗಣಿಗಾರಿಕೆ ಮೇಲೆ ನಿಗಾ ಇರಿಸಬೇಕು. ಚೆಕ್‍ಪೋಸ್ಟ್‌ನಲ್ಲಿ ಬಿಗಿ ತಪಾಸಣೆ ನಡೆಸಬೇಕು. ಅಗತ್ಯವಿದ್ದರೆ ಗೃಹ ರಕ್ಷಕ ಸಿಬ್ಬಂದಿ ಸೇವೆ ಪಡೆಯಬೇಕು ಎಂದು ತಾಕೀತು ಮಾಡಿದರು.

ಕಲ್ಲು ಗಣಿಗಾರಿಕೆ ಮೇಲೂನಿಗಾ

ಅನಧಿಕೃತ ಕಲ್ಲು ಗಣಿಗಾರಿಕೆ ಮೇಲೆ ನಿಗಾ ಇರಿಸಬೇಕು.ಅಕ್ರಮ ಗಣಿಗಾರಿಕೆಗೆ ಅವಕಾಶ ನೀಡಬಾರದು. ಕ್ವಾರಿಗೆ ಅನುಮತಿ ನೀಡುವಾಗ ಮಾರ್ಗಸೂಚಿ ಅನುಸರಿಸಬೇಕು. ಗ್ರಾಮಠಾಣಾದಿಂದ 500 ಮೀಟರ್ ವ್ಯಾಪ್ತಿಯ ಒಳಗೆ, ರಾಷ್ಟ್ರೀಯ ಹೆದ್ದಾರಿಯಿಂದ 200 ಮೀಟರ್ ಒಳಗೆ, 50ಕ್ಕೂ ಹೆಚ್ಚಿನ ಜನವಸತಿ ಇರುವ ಪ್ರದೇಶಗಳಲ್ಲಿ ಗಣಿಗಾರಿಕೆಗೆ ಅವಕಾಶ ನೀಡಬಾರದು ಎಂದು ತಾಕೀತು ಮಾಡಿದರು.

ಅಕ್ರಮ ಕ್ವಾರಿಗಳ ಮೇಲೆ ದಾಳಿ ನಡೆಸಿ, ಯಂತ್ರೋಪಕರಣ ವಶಪಡಿಸಿಕೊಳ್ಳಲಾಗಿದೆ. ಕೋಟೆಗಂಗೂರಿನಲ್ಲಿ ಅರಣ್ಯ ಪ್ರದೇಶದಲ್ಲಿ ಕ್ವಾರಿ ನಡೆಸುತ್ತಿದ್ದ ಸ್ಥಳದಲ್ಲಿ 17 ವಾಹನ, ದೇವಾತಿಕೊಪ್ಪ ಅರಣ್ಯ ಪ್ರದೇಶದಲ್ಲಿ ಒಂದು ಕಂಪ್ರೆಸ್ಸರ್‌,ಸ್ಫೋಟಕ ಸಾಮಾಗ್ರಿಗಳು, ಗೆಜ್ಜೆನಹಳ್ಳಿಬಳಿಎರಡು ಕಂಪ್ರೆಸ್ಸರ್ ಹಾಗೂ ಕ್ವಾರಿಗೆ ಸಂಬಂಧಿಸಿದ ಯಂತ್ರೋಪಕರಣ ವಶಪಡಿಸಿಕೊಳ್ಳಲಾಗಿದೆ. ಹಲವರ ಮೇಲೆ ಮೊಕದ್ದಮೆ ದಾಖಲಿಸಲಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಅಧಿಕಾರಿಗಳು ಮಾಹಿತಿ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಾಂತರಾಜು, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ,ಹೆಚ್ಚುವರಿಜಿಲ್ಲಾಧಿಕಾರಿ ಜೆ.ಅನುರಾಧಾ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT